ಕಲ್ಲಿದ್ದಲು ಹಗರಣ: ಟಿಎಂಸಿ ಮುಖಂಡನ ಪತ್ನಿಗೆ ಏರ್‌ಪೋರ್ಟ್‌ನಲ್ಲಿ ತಡೆ

Published : Jun 05, 2023, 02:48 PM IST
ಕಲ್ಲಿದ್ದಲು ಹಗರಣ: ಟಿಎಂಸಿ ಮುಖಂಡನ ಪತ್ನಿಗೆ ಏರ್‌ಪೋರ್ಟ್‌ನಲ್ಲಿ ತಡೆ

ಸಾರಾಂಶ

 ದುಬೈಗೆ ಪಲಾಯನಗೊಳ್ಳಲು ಮುಂದಾದ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಮುಖರ್ಜಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ. 

ಕೋಲ್ಕತ್ತಾ: ದುಬೈಗೆ ಪಲಾಯನಗೊಳ್ಳಲು ಮುಂದಾದ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಮುಖರ್ಜಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ. ಟಿಎಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಬಹುಕೋಟಿ ಮೊತ್ತದ ಕಲ್ಲಿದ್ದಲು ಹಗರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಿಂದ ಹಲವು ಬಾರಿ ವಿಚಾರಣೆಗೆ ಒಳಗಾಗಿದ್ದು, ಈ ಹಿನ್ನೆಲೆಯಲ್ಲಿ ಪತ್ನಿಯ ವಿದೇಶಿ ಪಯಣಕ್ಕೆ ತಡೆ ಬಿದ್ದಿದೆ. 

ದುಬೈಗೆ ತೆರಳುವುದಕ್ಕಾಗಿ ತನ್ನ ಇಬ್ಬರು ಮಕ್ಕಳೊಂದಿಗೆ ರುಜಿರಾ ಕೋಲ್ಕತ್ತಾದ ನೇತಾಜಿ ಸುಭಾಷ್‌ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ಬಗ್ಗೆ ಆಕೆಯ ವಕೀಲರು ಮಾತನಾಡಿದ್ದು, ಆಕೆ ಜಾರಿ ನಿರ್ದೇಶನಾಲಯಕ್ಕೆ ತನ್ನ ಪ್ರಯಾಣದ ಮಾಹಿತಿ ನೀಡಿದ್ದಲ್ಲದೇ ಆಕೆ ಪ್ರಯಾಣದ ಟಿಕೆಟ್‌ನ್ನು ಕೂಡ ಇಡಿಗೆ ಸಲ್ಲಿಸಿದ್ದಳು. ಈ ವೇಳೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಗ ಆಕೆಯನ್ನು ಪ್ರಯಾಣ ಮಾಡದಂತೆ ತಡೆಯಲಾಗಿದೆ. ಆಕೆ ಈಗ ಮರಳಿ ಮನೆಗೆ ಹೋಗಿದ್ದು, ನಾವು  ಕಾನೂನಿನ ಆಯ್ಕೆಗಳನ್ನು ಪರಿಗಣಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್‌ನ '48,20,69,00,00,000 ರೂ. ಭ್ರಷ್ಟಾಚಾರ’ದ ಬಗ್ಗೆ ವಿಡಿಯೋ ರಿಲೀಸ್ ಮಾಡಿದ ಬಿಜೆಪಿ

ಬಹುಕೋಟಿ ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ರುಜಿರಾ ಬ್ಯಾನರ್ಜಿ ಅವರನ್ನು ಕೂಡ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಹಲವು ಬಾರಿ ವಿಚಾರಣೆ ನಡೆಸಿದೆ. ಒಂದು ಪ್ರಕರಣದಲ್ಲಿ ಇಡಿ ಹೊರಡಿಸಿದ ಲುಕ್‌ಔಟ್ ನೋಟಿಸ್ (lookout notice) ಅನ್ನು ಉಲ್ಲೇಖಿಸಿ ಆಕೆಯನ್ನು ವಿಮಾನ ನಿಲ್ದಾಣದ  ವಲಸೆ ವಿಭಾಗದಲ್ಲಿ ನಿಲ್ಲಿಸಲಾಯಿತು. ಆಕೆಯ ವಿದೇಶ ಪ್ರವಾಸಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ, ಎಂದು ಅವರ ವಕೀಲರೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 

ಪಶ್ಚಿಮ ಬಂಗಾಳದ (West Bengal) ಅಸನ್ಸೋಲ್ ಬಳಿಯ ಕುನುಸ್ಟೋರಿಯಾ (Kunustoria) ಮತ್ತು ಕಜೋರಾದಲ್ಲಿ(Kajora) ಪೂರ್ವ ಕಲ್ಲಿದ್ದಲು (West Bengal) ಗಣಿಗಳ ಗುತ್ತಿಗೆ ಗಣಿಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿವೆ. ₹ 1,300 ಕೋಟಿಯಷ್ಟು ಹಣಕಾಸು ವಹಿವಾಟು ನಡೆದಿರುವ ಬಗ್ಗೆ ತನಿಖೆಗಳು ಸುಳಿವು ನೀಡಿದ್ದು, ಅದರಲ್ಲಿ ಬಹುಪಾಲು ಹಲವು ಪ್ರಭಾವಿ ವ್ಯಕ್ತಿಗಳಿಗೆ ಹೋಗಿದೆ. ಹವಾಲಾ ಮೂಲಕ ಈ ಪ್ರಭಾವಿ ವ್ಯಕ್ತಿಗಳ ವಿದೇಶಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಕಲ್ಲಿದ್ದಲು ಹಗರಣ: ಮಾಜಿ ಕಾರ್ಯದರ್ಶಿ ಎಚ್‌.ಸಿ. ಗುಪ್ತಾಗೆ 3 ವರ್ಷ ಜೈಲು ಶಿಕ್ಷೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!