ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?

Kannadaprabha News   | Kannada Prabha
Published : Dec 20, 2025, 08:11 AM IST
Cold wave threatens Karnataka Orange alert issued everywhere

ಸಾರಾಂಶ

Karnataka weather update: ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ಡಿ.20): ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಪೈಕಿ ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯು ತೀವ್ರವಾಗಿರುವ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. 

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಶೀತ ಅಲೆ ಇರಲಿದ್ದು, ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಇನ್ನಷ್ಟು ಚಳಿ; ತಾಪಮಾನ ಕುಸಿತ, ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

ಕನಿಷ್ಠ ಉಷ್ಣಾಂಶದಲ್ಲಿ ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆ ಕಂಡು ಬರಲಿದೆ 

ರಾಯಚೂರಿನಲ್ಲಿ ರಾಜ್ಯದ ಅತಿ ಕಡಿಮೆ ಕನಿಷ್ಠ ಉಷ್ಣಾಂಶ 9.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!
india Latest News Live: ನ್ಯಾಷನಲ್‌ ಹೆರಾಲ್ಡ್ ಕೇಸು: ಹೈಕೋರ್ಟ್‌ ಮೊರೆ ಹೋದ ಜಾರಿ ನಿರ್ದೇಶನಾಲಯ