ಕಾಲೇಜು ವಿದ್ಯಾರ್ಥಿಗಳ ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡ್ಕಿಕಿಯಾದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಡೆಹ್ರಡೂನ್(ನ.12) ಕಾಲೇಜು ವಿದ್ಯಾರ್ಥಿಗಳು ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಒಟ್ಟು 7 ವಿದ್ಯಾರ್ಥಿಗಳು ಇನೋವಾ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಡೆಹ್ರಡೂನ್‌ನ ಒನ್‌ಜಿಸಿ ಚೌಕ್‌ನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಿನರ್ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿಗಳು ಪ್ರವಾಸದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವೇಗವಾಗಿ ಸಾಗುತ್ತಿದ್ದ ವಿದ್ಯಾರ್ಥಿಗಳಿದ್ದ ಇನ್ನೋವಾ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಹೆಚ್ಚಿದ್ದ ಕಾರಣ ಇನ್ನೋವಾ ಕಾರು ನಜ್ಜು ಗುಜ್ಜಾಗಿದೆ. ಅಪಘಾತಕ್ಕೆ ಕಾರಣಗಳು ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಕಂಟೊನ್ಮೆಂಟ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಕರಿತು ಮಾಹಿತಿ ನೀಡಿರುವ ಪೊಲೀಸ್ ಕೈಲಾಶ್ ಸಿಂಗ್, ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಪರಿಶೀಲನೆ ನಡೆಯುತ್ತಿದೆ ಎಂದಿದ್ದಾರೆ.
undefined
ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಮೃತ ಕಾಲೇಜು ವಿದ್ಯಾರ್ಥಿಗಳನ್ನು ಗುನೀತ್(19), ಕಾಮಾಕ್ಷಿ(20) ನವ್ಯಾ ಗೋಯಲ್(23) ರಿಷಬ್ ಜೈನ್(24), ಕುನಾಲ್ ಕುಕ್ರೇಜಾ(23), ಅತುಲ್ ಅಗರ್ವಾಲ್(24) ಎಂದು ಗುರುತಿಸಲಾಗಿದೆ. ಇನ್ನು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿ ಸಿದ್ದೇಶ್ ಅಗರ್ವಾಲ್ ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕನ ಅಜಾಗರೂಕತೆ ಡ್ರೈವಿಂಗ್‌ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅಪಘಾತದ ಬೆನ್ನಲ್ಲೇ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದ ಎಂದು ಸ್ಥಳೀಯರು ಹೇಳಿದ್ದರು.
ಒಂದೆಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪರಾರಿಯಾಗಿದ್ದ ಟ್ರಕ್ ಚಾಲಕನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮೃತ ಹಾಗೂ ಗಾಯಗೊಂಡಿರು ವಿದ್ಯಾರ್ಥಿಗಳ ಕುಟುಂಬಸ್ಥರ ಮಾಹಿತಿಯನ್ನು ಕಾಲೇಜಿನಿಂದ ಪಡೆಯಲಾಗಿದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಸ್ ಅಪಘಾತದಲ್ಲಿ 12 ಮಂದಿ ಮೃತ
ನವೆಂಬರ್ 11 ರಂದು ಉತ್ತರ ಪ್ರದೇಶದ ಗುಲಾಬ್‌ಪುರ್ ಗ್ರಾಮದಲ್ಲಿ ಬಸ್ ಅಪಘಾತ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. ಮುದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕುಟುಂಬಸ್ಥರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಮದುವೆ ಸಮಾರಂಭಕ್ಕೆ ಬಸ್ ವ್ಯವಸ್ಥೆ ಮಾಡಲಾಗಿತ್ತು. ಬಸ್ ಮೂಲಕ ಕುಟುಂಬಸ್ಥರು ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇನ್ನು ಹಲವರು ಗಾಯಗೊಂಡಿದ್ದಾರೆ.