
ಜಮ್ಮು (ಸೆ.9):‘ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ’ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಕೇಶ್ ಸಿಂಗ್ ಠಾಕೂರ್ ಪರ ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಸಿಂಗ್, ‘ನಾನು ಪಾಕ್ ಆಕ್ರಮಿತ ಕಾಶ್ಮೀರದ ನಿವಾಸಿಗಳಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ಪಾಕಿಸ್ತಾನ ಸರ್ಕಾರ ನಿಮ್ಮನ್ನು ವಿದೇಶಿಯರೆಂದು ಪರಿಗಣಿಸುತ್ತದೆ. ಆದರೆ ನಾವು ಭಾರತೀಯರು, ನಿಮ್ಮನ್ನು ನಮ್ಮವರು ಎಂದೇ ಭಾವಿಸುತ್ತೇವೆ. ಹೀಗಾಗಿ ಬಂದು ನಮ್ಮನ್ನು ಸೇರಿಕೊಳ್ಳಿ’ ಎಂದು ಕರೆ ನೀಡಿದರು.
ಇದೇ ವೇಳೆ ಅಧಿಕಾರಕ್ಕೆ ಬಂದರೆ ರದ್ದಾಗಿರುವ 370ನೇ ವಿಧಿ ಮರುಸ್ಥಾಪನೆಯ ಕುರಿತು ಭರವಸೆ ನೀಡಿರುವ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಬಗ್ಗೆ ಕಿಡಿಕಾರಿರುವ ಸಿಂಗ್, ‘ಬಿಜೆಪಿ ಇರುವವರೆಗೂ ಅದು ಸಾಧ್ಯವಾಗದು’ ಎಂದು ಸವಾಲು ಹಾಕಿದರು.
ನಾಳೆಯ ಬಜೆಟ್ ಹೇಗಿರಲಿದೆ ಎಂಬುದರ ಮಹತ್ವದ ಸುಳಿವು ನೀಡಿದ ಪ್ರಧಾನಿ ಮೋದಿ
ಅಫ್ಜಲ್‌ಗೆ ಮಾಲೆ ಹಾಕ್ತೀರಾ?:
ಈ ನಡುವೆ, ‘ಅಫ್ಜಲ್ ಗುರುವನ್ನು ಗಲ್ಲಿಗೇರಿಸಬಾರದಿತ್ತು. ಅವರನ್ನು ಗಲ್ಲಿಗೇರಿಸಿದ ಉದ್ದೇಶ ಈಡೇರಿಲ್ಲ. ನಾನು ಯಾವುದೇ ಗಲ್ಲು ಶಿಕ್ಷೆಗೆ ವಿರೋಧ ಇದ್ದೇನೆ’ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿಕೆಯನ್ನು ರಾಜನಾಥ ಸಿಂಗ್ ತೀವ್ರವಾಗಿ ಖಂಡಿಸಿದರು.‘ಅಫ್ಜಲ್ ಗುರುವನ್ನು ಗಲ್ಲಿಗೇರಿಸಬಾರದಿತ್ತು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಅಫ್ಜಲ್ ಗುರುವಿಗೆ ಮಾಲೆ ಹಾಕಲು ಅವರು ಬಯಸಿದ್ದೀರಾ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ?’ ಸಿಂಗ್ ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ