ಅನುಕಂಪದ ನೇಮಕ ಹಕ್ಕು ಅಲ್ಲ: ಸುಪ್ರೀಂನಿಂದ ಮಹತ್ವದ ತೀರ್ಪು

Published : Nov 14, 2024, 08:09 AM IST
ಅನುಕಂಪದ ನೇಮಕ ಹಕ್ಕು ಅಲ್ಲ: ಸುಪ್ರೀಂನಿಂದ ಮಹತ್ವದ ತೀರ್ಪು

ಸಾರಾಂಶ

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮೃತ ನೌಕರನ ಸೇವಾ ಷರತ್ತುಗಳಲ್ಲಿ ಇದರ ಉಲ್ಲೇಖವಿಲ್ಲದಿದ್ದರೆ ಮತ್ತು ನಿಗದಿತ ಕಾಲಮಿತಿ ಬಳಿಕ ಮಾಡಿದ ಮನವಿ ಪರಿಗಣಿಸಲಾಗದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನವದೆಹಲಿ: ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಹಕ್ಕಲ್ಲ. ಏಕೆಂದರೆ ಮೃತ ನೌಕರನ ಸೇವಾ ಷರತ್ತುಗಳಲ್ಲಿ ಇದರ ಉಲ್ಲೇಖವಿಲ್ಲ. ನಿಗದಿತ ಕಾಲಮಿತಿ ಬಳಿಕ ಇಂಥ ಉದ್ಯೋಗಕ್ಕೆ ಮಾಡಿದ ಮನವಿ ಪರಿಗಣಿಸಲಾಗದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. 1997ರಲ್ಲಿ ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರ ಪುತ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಅಭಯ್ ಎಸ್. ಒಕಾ ನೇತೃತ್ವದ ತ್ರಿಸದಸ್ಯ ಪೀಠ, 'ನೀತಿಗೆ ವಿರುದ್ಧವಾಗಿ ಒಬ್ಬರ ಪರವಾಗಿ ಅಕ್ರಮವನ್ನು ಮುಂದುವರಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಲಾಗದು. ಅನುಕಂಪ ಆಧಾರಿತ ನೇಮಕಾತಿಯು ಮೃತರ ಕುಟುಂಬಕ್ಕೆ ಆ ಸಮಯದಲ್ಲಿ ತುರ್ತು ಆರ್ಥಿಕ ಸಹಾಯ ಮಾಡಲು ಇರುವುದೇ ಹೊರತು, ಅದು ಅವರ ಪರಿಪೂರ್ಣ ಹಕ್ಕಲ್ಲ' ಎಂದು ಸ್ಪಷ್ಟಪಡಿಸಿದೆ.

'ಅನುಕಂಪ ಆಧಾರಿತ ನೇಮಕಾತಿ ನೌಕರನ ಸೇವೆಯ ಷರತ್ತುಗಳಲ್ಲಿಲ್ಲ. ಬದಲಿಗೆ, ಇಂತಹ ನೇಮಕಾತಿಗಳನ್ನು ನೀತಿ, ನಿಯಮ, ಸೂಚನೆಗಳ ಅಡಿಯಲ್ಲಿ ಮಾತ್ರವೇ ಮಾಡಲಾಗುವುದು' ಎಂದು ಪೀಠ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. 

ಇದನ್ನೂ ಓದಿ: 

ಏನಿದು ಪ್ರಕರಣ?: 1997ರಲ್ಲಿ ಜೈ ಪ್ರಕಾಶ್ ಎಂಬ ಪೇದೆ ಕರ್ತವ್ಯದ ವೇಳೆ ಸಾವನ್ನಪ್ಪಿದ್ದರು. ಆಗ ಅವರ ಮಗ ಟಿಂಕು ಕೇವಲ 7 ವರ್ಷದವನಾಗಿದ್ದ. ಪ್ರಕಾಶ್‌ರ ಪತ್ನಿ ಅನಕ್ಷರಸ್ಥೆಯಾಗಿದ್ದ ಕಾರಣ ಅನುಕಂಪದ ಆಧಾರದಲ್ಲಿ ತನಗೆ ಕೆಲಸ ಕೊಡುವಂತೆ ಅರ್ಜಿ ಸಲ್ಲಿಸಿರಲಿಲ್ಲ. ಬದಲಿಗೆ, ಅಪ್ರಾಪ್ತನಾಗಿರುವ ಮಗ ವಯಸ್ಸಿಗೆ ಬಂದಾಗ ಅವನಿಗೆ ಕೆಲಸ ಕೊಡಬೇಕೆಂದು ಮನವಿ ಮಾಡಿದ್ದರು. ಅದರಂತೆ ಟಿಂಕು 2008ರಲ್ಲಿ ಅದೇ ಹುದ್ದೆಗೆ ಅರ್ಜಿ ಸಲ್ಲಿಸಿದ್ದ. ಅದನ್ನು ತಿರಸ್ಕರಿಸಿದ ಅಧಿಕಾರಿಗಳು, ನೌಕರ ಸಾವನ್ನಪ್ಪಿದ 3 ವರ್ಷಗಳೊಳಗಾಗಿ ಅರ್ಜಿ ಸಲ್ಲಿಸಬಹುದಷ್ಟೇ ಎಂದಿದ್ದರು. ಪಂಜಾಬ್ ಹಾಗೂ ಹರ್ಯಾಣ ಸರ್ಕಾರವೂ ಕ ಈ ಮನವಿ ನಿರಾಕರಿಸಿದ್ದು, ಈಗ ಸುಪ್ರೀಂ ಕೂಡ ಅವುಗಳ ನಿರ್ಧಾರ ಎತ್ತಿಹಿಡಿದಿದೆ. ಪರಿವಾರಕ್ಕೆ ಆರ್ಥಿಕ ನೆರವು ಒದಗಿಸುವ ಭರವಸೆ ನೀಡಿದೆ.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು