ಲಸಿಕೆ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್, ಶುಭ ಕೋರಿದ ಪಿಎಂ ಮೋದಿ!

Published : Jan 03, 2021, 12:47 PM ISTUpdated : Jan 03, 2021, 02:23 PM IST
ಲಸಿಕೆ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್, ಶುಭ ಕೋರಿದ ಪಿಎಂ ಮೋದಿ!

ಸಾರಾಂಶ

ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹಾಗೂ ಭಾರತ್ ಬಯೋಟೆಕ್‌ನ ಕೊರೋನಾ ವೈರಸ್ ಲಸಿಕೆ ಬಳಕೆಗೆ ಅನುಮತಿ| ದೀರ್ಘ ಕಾಲದ ಕಾಯುವಿಕೆ ಅಂತ್ಯ| ಭಾರತೀಯರಿಗೆ ಶುಭ ಕೋರಿದ ಪಿಎಂ ಮೋದಿ

ನವದೆಹಲಿ(ಜ.03): DCGI ಇಂದು, ಭಾನುವಾರ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹಾಗೂ ಭಾರತ್ ಬಯೋಟೆಕ್‌ನ ಕೊರೋನಾ ವೈರಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ. ಈ ಮೂಲಕ ಕೊರೋನಾ ಲಸಿಕೆ ಸಂಬಂಧ ದೀರ್ಘ ಕಾಲದ ಕಾಯುವಿಕೆ ಕೊನೆಗೊಂಡಿದೆ. 

ಸದ್ಯ ದೇಶದಲ್ಲಿ ಕೊರೋನಾ ಲಸಿಕೆ ಬಳಕೆಗೆ ಅನುಮತಿ ಸಿಕ್ಕ ಬೆನ್ನಲ್ಲೇ ಪಿಎಂ ಮೋದಿ ದೇಶಕ್ಕೆ ಶುಭ ಕೋರುತ್ತಾ ಸೀರಂ ಇನ್ಸ್ಟಿಟ್ಯೂಟ್ ಹಾಗೂ ಭಾರತ್ ಬಯೋಟೆಕ್ ಲಸಿಕೆಗೆ DCGI ಅನುಮತಿ ಸಿಕ್ಕ ಬಳಿಕ ಭಾರತ ಕೊರೋನಾ ಮುಕ್ತ ರಾಷ್ಟ್ರವಾಗುವ ದಾರಿ ಸುಗಮವಾಗಿದೆ ಎಂದಿದ್ದಾರೆ.

"

ಇನ್ನು ತಮ್ಮ ಎರಡನೇ ಟ್ವೀಟ್‌ನಲ್ಲಿ ಅನುಮತಿ ಪಡೆದ ಎರಡೂ ಲಸಿಕೆಗಳು ಭಾರತದಲ್ಲೇ ನಿರ್ಮಾಣವಾಗಿವೆ ಎಂಬ ವಿಚಾರವಾಗಿ ನಾವು ಭಾರತೀಯರು ಹೆಮ್ಮೆ ಪಡಬೇಕು. ಇದು ಆತ್ಮನಿರ್ಭರ್ ಭಾರತದ ಕನಸು ಸಾಕಾರಗೊಳಿಸುವಲ್ಲಿ ನಮ್ಮ ವಿಜ್ಞಾನಿಗಳು ತೋರುತ್ತಿರುವ ಉತ್ಸಾಹವನ್ನು ಬಿಂಬಿಸುತ್ತದೆ ಎಂದಿದ್ದಾರೆ.

ಇನ್ನು ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ಮೋದಿ 'ಕಠಿಣ ಪರಿಸ್ಥಿತಿಯಲ್ಲೂ ಉತ್ಕೃಷ್ಟ ಕಾರ್ಯ ನಿರ್ವಹಿಸಿದ ನಾವು ಡಾಕ್ಟರ್, ವೈದ್ಯಕೀಯ ಸಿಬ್ಬಂದಿ, ವಿಜ್ಞಾನಿಗಳು, ಪೊಲೀಸರು, ಸ್ವಚ್ಛತಾ ಸಿಬ್ಬಂದಿಗಳಿಗೆ ಋಣಿಯಾಗಿದ್ದೇನೆಂದು ಮತ್ತೊಮ್ಮೆ ಹೇಳಲಿಚ್ಛಿಸುತ್ತೇನೆ' ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
India Latest News Live: 14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!