Congress VS TMC: UPA ನೇತೃತ್ವ ತಿರಸ್ಕರಿಸಿದ ಮಮತಾ: ED, CBI ಭಯದಿಂದ ಈ ಹೇಳಿಕೆ ಎಂದ ಕಾಂಗ್ರೆಸ್!

Published : Dec 02, 2021, 12:04 PM ISTUpdated : Dec 02, 2021, 12:35 PM IST
Congress VS TMC: UPA ನೇತೃತ್ವ ತಿರಸ್ಕರಿಸಿದ ಮಮತಾ: ED, CBI ಭಯದಿಂದ ಈ ಹೇಳಿಕೆ ಎಂದ ಕಾಂಗ್ರೆಸ್!

ಸಾರಾಂಶ

* ಕಾಂಗ್ರೆಸ್‌ ವಿರುದ್ಧ ಮಮತಾ ಕಿಡಿ * ಯುಪಿಎ ವಿರುದ್ಧ ಹೆಳಿಕೆ ಕೊಟ್ಟ ಮಮತಾಗೆ ಖರ್ಗೆ ತಿರುಗೇಟು * ನೀವು ಬಿಜೆಪಿಗೆ ಸಹಾಯ ಮಾಡುತ್ತಿದ್ದೀರಿ ಎಂದ ಖರ್ಗೆ

ಮುಂಬೈ(ಡಿ.02): ಬಿಜೆಪಿ ವಿರುದ್ಧ ತೃತೀಯ ರಂಗದ (Third Front) ಆರಂಭಿಸುವ ತೊಡಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal Chief Minister Mamata Banerjee), ಕಾಂಗ್ರೆಸ್ ಅನ್ನು ಕೆರಳಿಸಿದ್ದಾರೆ. ಮೊದಲನೆಯದಾಗಿ ಅವರು ಕಾಂಗ್ರೆಸ್ ಅನ್ನು ಈ ಮೈತ್ರಿಯಿಂದ ದೂರವಿಟ್ಟಿದ್ದಾರೆ. ಎರಡನೆಯದಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ (UPA) ಮೈತ್ರಿ ಬಗ್ಗೆ ಇನ್ನು ಮುಂದೆ ಯಾವುದೇ ಮೈತ್ರಿ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ನ್ನು ತಿರಸ್ಕರಿಸಿದ್ದಾರೆ, ಹೀಗಿರುವಾಗ ಕಾಂಗ್ರೆಸ್ ಮಮತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಮಮತಾ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆಂದ ಕಾಂಗ್ರೆಸ್‌

ಮಮತಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge)ಅವರು ಇಂತಹ ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ತಮ್ಮ ನಾಯಕ ರಾಹುಲ್ ಗಾಂಧಿ ಪ್ರತಿಯೊಂದು ವಿಷಯದಲ್ಲೂ ಹೋರಾಟ ನಡೆಸುತ್ತಿದ್ದಾರೆ ಎಂದು ಎಬಿಪಿ ನ್ಯೂಸ್ ಜೊತೆಗಿನ ಸಂವಾದದಲ್ಲಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಅವರು ರೈತರ ಸಮಸ್ಯೆಯ ವಿಚಾರವಾಗಿ ಹೋರಾಡಿದರು, ಹಣದುಬ್ಬರದ ವಿವಾರವಾಗಿ ಹೋರಾಡಿದರು, ಯುಪಿಯಲ್ಲಿ ಎಲ್ಲಿ ಅಪಘಾತಗಳು ಸಂಭವಿಸಿದರೂ ಪ್ರಿಯಾಂಕಾ ಗಾಂಧಿ; ಅಲ್ಲಿ ಹೋರಾಟ ಮಾಡಿದ್ದಾರೆ, ಇನ್ನೂ ರೈತರಿಗಾಗಿ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೋರಾಟ ಮಾಡದೇ ಇದ್ದಿದ್ದರೆ ಇಷ್ಟು ರಾಜ್ಯಗಳಲ್ಲಿ ಸರ್ಕಾರ ರಚನೆಯಾಗುತ್ತಿರಲಿಲ್ಲ. ಮಮತಾ ಅವರ ಇಂತಹ ಹೇಳಿಕೆಗಳು ಸರಿಯಲ್ಲ. ಇಡಿ ಮತ್ತು ಸಿಬಿಐಗೆ ಹೆದರಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಮ್ಮ ನಾಯಕ (ರಾಹುಲ್ ಗಾಂಧಿ) ಕ್ಷೇತ್ರದಲ್ಲಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನೀವು ಹೋರಾಡುವ ವ್ಯಕ್ತಿ ಬಗ್ಗೆ ಇಂತಹ ಟೀಕೆಗಳನ್ನು ಮಾಡಿದರೆ, ನೀವು ಬಿಜೆಪಿಗೆ (BJP) ಸಹಾಯ ಮಾಡುತ್ತಿದ್ದೀರಿ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಎರಡು ದಿನಗಳಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದ ಮಮತಾ

ಪಶ್ಚಿಮ ಬಂಗಾಳದಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮಮತಾ ಬ್ಯಾನರ್ಜಿ ಅವರ ವರ್ತನೆ ಆಕ್ರಮಣಕಾರಿಯಾಗಿದೆ. ಅವರು ಎರಡು ದಿನಗಳ ಪ್ರವಾಸದ ಮೇರೆಗೆ ನವೆಂಬರ್ 30 ರಂದು ಮುಂಬೈ ತಲುಪಿದರು. ಡಿಸೆಂಬರ್ 1 ರಂದು ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದರು. ಇದೇ ವೇಳೆ ಸಮಾಜದ ನಾನಾ ವರ್ಗದ ಜನತೆ ನಾಗರಿಕ ಸಭೆ ನಡೆಸುವ ಮೂಲಕ ಬಿಜೆಪಿ ವಿರುದ್ಧ ಸಜ್ಜುಗೊಳಿಸುವಂತೆ ಮನವಿ ಮಾಡಿದರು.

ಮುಂಬೈನಲ್ಲಿ ಕಾಂಗ್ರೆಸ್ ವಿರೋಧಿ ಹೇಳಿಕೆ

ಕಾಂಗ್ರೆಸ್ ನೇತೃತ್ವದ ಯುಪಿಎ ಇನ್ನು ಮುಂದೆ ಮೈತ್ರಿಯಾಗಿಲ್ಲ ಎಂದು ಮಮತಾ ಬ್ಯಾನರ್ಜಿ ಇಲ್ಲಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಅಸ್ತಿತ್ವವಿಲ್ಲ ಎಂದು ಟೀಕಿಸಿದ್ದಾರೆ. ಹೀಗಿರುವಾಗ ಮಮತಾ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್ ಇಲ್ಲದೆ ಬಿಜೆಪಿಯನ್ನು ಸೋಲಿಸಬಹುದು ಎಂಬ ಯಾವುದೇ ಪಕ್ಷದ ಚಿಂತನೆ ಕೇವಲ ಕನಸು, ಭಾರತೀಯ ರಾಜಕಾರಣದ ಸತ್ಯ ಎಲ್ಲರಿಗೂ ಗೊತ್ತು ಎಂದಿದ್ದಾರೆ. 

ಇನ್ನು ಅತ್ತ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಮತಾ ಬ್ಯಾನರ್ಜಿಯನ್ನು ಹುಚ್ಚಿ ಎಂದು ಕೂಡ ಹೇಳಿದ್ದಾರೆ. ಮಮತಾಗೆ ಈಗ ಹುಚ್ಚು ಹೆಚ್ಚಿದೆ. ಇಡೀ ಭಾರತವು ಮಮತಾ-ಮಮತಾ ಮಾಡುತ್ತಿದೆ ಎಂದು ಅವರು ಭಾವಿಸುತ್ತಾರೆ, ಆದರೆ ಬಂಗಾಳವು ಮಮತಾ ಅಲ್ಲ ಮತ್ತು ಮಮತಾ ಬಂಗಾಳವಲ್ಲ. ಬಿಜೆಪಿ ಮತ್ತು ಮಮತಾ ಇಬ್ಬರೂ ಬೆರೆತಿದ್ದಾರೆ ಎಂದು ಕಿಡಿ ಕಾರಿದ್ದಾರೆ. 

ಪವಾರ್ ಅಸಮಾಧಾನ:

ಮಮತಾ ಅವರ ಕಾಂಗ್ರೆಸ್-ಮುಕ್ತ ಅಜೆಂಡಾದಿಂದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸಂತೋಷವಾಗಿಲ್ಲ. ಹೀಗಿರುವಾಗ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ತೃತೀಯ ರಂಗ ರಚಿಸಬಹುದಾ ಎಂಬ ಆತಂಕ ಶುರುವಾಗಿದೆ. ಮಂಗಳವಾರ, ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಪಕ್ಷಕ್ಕೂ ತನ್ನ ನೆಲೆಯನ್ನು ಹೆಚ್ಚಿಸಲು ಎಲ್ಲ ಹಕ್ಕುಗಳಿವೆ, ಆದರೆ ಕಾಂಗ್ರೆಸ್ ಅನ್ನು ಹೊರಗಿಟ್ಟು ಬಿಜೆಪಿಯ ವಿರೋಧಿಗಳನ್ನು ಒಗ್ಗೂಡಿಸುವುದು ಅಸಾಧ್ಯ ಎಂದು ಹೇಳಿದ್ದಾರೆ. ಈ ವಿಚಾರವನ್ನು ಪವಾರ್ ಸಾಹಿಬ್ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ ಎಂದೂ ಮಲಿಕ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ