ಚುನಾವಣೆ ಬಳಿಕ ಮತ್ತೊಂದು ಯಾತ್ರೆ ಘೋಷಿಸಿದ ಕಾಂಗ್ರೆಸ್  

By Mahmad Rafik  |  First Published Jun 8, 2024, 2:15 PM IST

Congress Dhanyawaad Yatra: ಈ ಯಾತ್ರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಯಾತ್ರೆ ವೇಳೆ ವಿಧಾನಸಭಾ ಕ್ಷೇತ್ರದ ವಿವಿಧ ಸಮುದಾಯದ ಜನರಿಗೆ ಸಂವಿಧಾನದ ಪ್ರತಿಯನ್ನು ನೀಡಿ ಗೌರವಿಸಲಾಗುತ್ತದೆ. 


ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ (Loksabha Elections Results 2024) ಪ್ರಕಟವಾಗಿ ಕೇಂದ್ರದಲ್ಲಿ ಸರ್ಕಾರ ರಚನೆಗೂ ಮುನ್ನವೇ ಕಾಂಗ್ರೆಸ್ ಹೊಸ ಯಾತ್ರೆಯನ್ನು (Congress New Yatra) ಘೋಷಿಸಿದೆ. ಧನ್ಯವಾದ ಯಾತ್ರೆ ಹೆಸರಿನಲ್ಲಿ ಜೂನ್ 11 ರಿಂದ ಜೂನ್ 15ರವರೆಗೆ ಈ ಯಾತ್ರೆ ನಡೆಯಲಿದೆ. ಧನ್ಯವಾದ ಯಾತ್ರೆ (Dhanyawaad Yatra) ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯದ 403 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಗುರಿಯನ್ನು ಹೊಂದಲಾಗಿದೆ. ಈ ಯಾತ್ರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಯಾತ್ರೆ ವೇಳೆ ವಿಧಾನಸಭಾ ಕ್ಷೇತ್ರದ ವಿವಿಧ ಸಮುದಾಯದ ಜನರಿಗೆ ಸಂವಿಧಾನದ ಪ್ರತಿಯನ್ನು ನೀಡಿ ಗೌರವಿಸಲಾಗುತ್ತದೆ. 

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿ ಐಎನ್‌ಡಿಐಎ ಒಕ್ಕೂಟದ ಸಮಾಜವಾದಿ ಪಾರ್ಟಿ 37 ಸ್ಥಾನಗಳನ್ನು ಗೆದ್ದುಕೊಂಡಿದೆ. ಎದುರಾಳಿ ಬಿಜೆಪಿ 33 ಕ್ಷೇತ್ರಗಳಲ್ಲಿ  ಗೆಲುವು ಸಾಧಿಸಿದೆ. ತಮ್ಮ ಮೈತ್ರಿಕೂಟದ ಸದಸ್ಯರನ್ನು ಗೆಲ್ಲಿಸಿದ ಮತ್ತು ತಮಗೆ ಮತ ನೀಡಿದ ಜನತೆಗೆ ಧನ್ಯವಾದ ಸಲ್ಲಿಸಲು ಕಾಂಗ್ರೆಸ್ ಈ ಯಾತ್ರೆಯನ್ನು ಹಮ್ಮಿಕೊಂಡಿದೆ. ಧನ್ಯವಾದ ಯಾತ್ರೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Tap to resize

Latest Videos

ನರೇಂದ್ರ ಮೋದಿ ಜೊತೆ ಪ್ರಮಾಣವಚನ ಸ್ವೀಕರಿಸುವ ಸಂಭಾವ್ಯರ ಪಟ್ಟಿ ಇಲ್ಲಿದೆ

ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಗೆಲುವು

ಈ ಬಾರಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದರು. ಬಿಜೆಪಿ ಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ರಾಹುಲ್ ಗಾಂಧಿ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. 2019ರ ಚುನಾವಣೆಯಲ್ಲಿ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ಸೋನಿಯಾ ಗಾಂಧಿ 1,61,178 ಮತಗಳ ಅಂತರದಿಂದ ಗೆದ್ದಿದ್ದರು.

ಚುನಾವಣೆ ಗೆಲ್ಲುತ್ತಿದ್ದಂತೆ 858 ಕೋಟಿಗೆ ಏರಿಕೆಯಾದ ಚಂದ್ರಬಾಬು ನಾಯ್ಡು ಆಸ್ತಿ: ಹೇಗೆ ಗೊತ್ತಾ? 

2019ರ ಚುನಾವಣೆಯಲ್ಲಿ ತನ್ನ ಭದ್ರಕೋಟೆಯಾದ ಅಮೇಥಿಯನ್ನು ಕಾಂಗ್ರೆಸ್ ಕಳೆದುಕೊಂಡಿತ್ತು. ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಕಿಶೋರಿ ಲಾಲ್ ಶರ್ಮಾ ಸ್ಪರ್ಧೆ ಮಾಡಿ 1.65 ಲಕ್ಷಗಳ ಮತದಿಂದ ಸ್ಮೃತಿ ಇರಾನಿಯನ್ನು ಸೋಲಿಸಿದ್ದಾರೆ. 

click me!