
ನವದೆಹಲಿ(ಡಿ.20): ಶನಿವಾರದಂದು ದೆಹಲಿಯಲ್ಲಿ ಕಾಂಗ್ರೆಸ್‌ನ ಹಲವಾರು ಅತೃಪ್ತ ನಾಯಕರೊಂದಿಗೆ 10 ಜನಪಥ ರಸ್ತೆಯಲ್ಲಿರುವ ಕಚೇರಿಯಲ್ಲಿ ಹೈಕಮಾಂಡ್ ನಡೆಸಿದ ಸಭೆ ಬಳಿಕ ನಾಲ್ಕು ರಾಜ್ಯಗಳಲ್ಲಿ ಪಕ್ಷ ಬದಲಾವಣೆ ಆರಂಭಿಸಿದೆ. ಆರಂಭ ಹಂತದಲ್ಲಿ ತೆಲ್ಲಂಗಾಣ, ಗುಜರಾತ್, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಬದಲಾವಣೆ ತರಲು ಸಜ್ಜಾಗಿದೆ. ಹೀಗಿರುವಾಗ ತೆಲ್ಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಗ್ರೇಟರ್ ಹೈದರಾಬಾದ್ ನಗರ ನಿಗಮ ಚುನಾವಣೆಯಲ್ಲಿ ಪಕ್ಷ ಅನುಭವಿಸಿದ ಸೋಲು ಹಾಗೂ ಕಳಪೆ ಪ್ರದರ್ಶನದ ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚಾವ್ಡಾ ಕೂಡಾ ಉಪ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಾದೇಶಿಕ ಅಧ್ಯಕ್ಷರೂ ಆಗಿರುವ ಕಮಲನಾಥ್ ಅವರಿಗೂ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗಿದೆ.
ಅತ್ತ ಶನಿವಾರದಂದು ಕಾಂಗ್ರೆಸ್ ಮುಂಬೈ ಪ್ರಾದೇಶಿಕ ಪಕ್ಷದಲ್ಲೂ ಬದಲಾವಣೆ ತರಲಾಗಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಅಶೋಕ್ ಅರ್ಜುನ್ ರಾವ್ ಜಗ್ತಾಪ್‌ರನ್ನು ಕಾಂಗ್ರೆಸ್ ಮುಂಬೈ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಅಸ್ಸಾಂ ಹಾಗೂ ಕೇರಳ ಮೂರು ಮೂರು ಅಖಿಲ ಭಾರತೀಯ ಕಾಂಗ್ರೆಸ್ ಕಮಿಟಿಗೂ ಅದಾಧಿಕಾರಿಗಳನ್ನು ನೇಮಿಸಿದ್ದಾರೆ. ಇಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ ಎಂಬುವುದು ಉಲ್ಲೇಖನೀಯ,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ