ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Published : Aug 02, 2020, 02:42 PM ISTUpdated : Aug 02, 2020, 02:49 PM IST
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಾರಾಂಶ

ಆಸ್ಪತ್ರೆಯಿಂದ ಬಿಡುಗಡೆಯಾದ ಸೋನಿಯಾ ಗಾಂಧಿ/ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ನಾಯಕಿ./ ದೆಹಲಿಯ ಗಂಗಾರಾಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್/ ಜುಲೈ.30ರಂದು ಸಂಜೆ ಏಳು ಗಂಟೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಗಂಗಾ ರಾಮ್ ಆಸ್ಪತ್ರೆಗೆ  ಬಂದಿದ್ದ ಗಾಂಧಿ

ನವದೆಹಲಿ( ಆ.02)  ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸ್ಚಾರ್ಜ್ ಆಗಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದ್ದು ಗಂಗಾ ರಾಮ್ ಆಸ್ಪತ್ರೆಯಿಂದ ಭಾನುವಾರ ಮನೆಗೆ ತೆರಳಿದ್ದಾರೆ.

ಜುಲೈ.30ರಂದು ಸಂಜೆ ಏಳು ಗಂಟೆ ಸಮಯದಲ್ಲಿ ರೂಟಿನ್ ಚೆಕ್ ಅಪ್ ಮತ್ತು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ಆಗಮಿಸಿದ್ದ ವೇಳೆ ಅವರನ್ನು ದಾಖಲು ಮಾಡಿಕೊಳ್ಳಲಾಗಿತ್ತು.

ಸೋನಿಯಾ ಟ್ರಸ್ಟ್ ನಲ್ಲಿ ವಿದೇಶಿ ಹಣ, ಏನಿದರ ಕತೆ!

ಎದೆ ಮತ್ತು ಉಸಿರಾಟದ ತಜ್ಞ ಡಾ.ಅರೂಪ್ ಕುಮಾರ್ ಬಸು ನೇತೃತ್ವದ ವೈದ್ಯರ ತಂಡವು ಸೋನಿಯಾ ಗಾಂಧಿಯವರ ಆರೋಗ್ಯ ತಪಾಸಣೆ ನಡೆಸಿತು. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಚೇರ್ ಮನ್ ಡಾ.ಡಿ.ಎಸ್.ರಾಣಾ ಮಾಹಿತಿ ನೀಡಿದ್ದಾರೆ.

ಸದ್ಯದ ರಾಜಕೀಯ ವಾತಾವರಣದ ಬಗ್ಗೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯರೊಂದಿಗೆ ಗುರುವಾರ ಸೋನಿಯಾ ಸಭೆ ನಡೆಸಿದ್ದರು. ಕೊರೋನಾ ವೈರಸ್ ದೇಶದ ಮೇಲೆ ಯಾವ ರೀತಿ ಕೆಟ್ಟ ಪರಿಣಾಮ ಉಂಟುಮಾಡುತ್ತಿದೆ ಎಂಬುದರ ಬಗ್ಗೆಯೂ ಚರ್ಚೆ ಆಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಅಗ್ರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!