ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಮಾಜಿ ಸಚಿವ, ಲೋಕಸಭಾ ಚುನಾವಣೆಗೂ ಮೊದಲೇ ತಳಮಳ!

Published : Feb 08, 2024, 01:34 PM IST
ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಮಾಜಿ ಸಚಿವ, ಲೋಕಸಭಾ ಚುನಾವಣೆಗೂ ಮೊದಲೇ ತಳಮಳ!

ಸಾರಾಂಶ

48 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತನಾಗಿ, ಶಾಸಕನಾಗಿ, ಸಚಿವರಾಗಿ ಸೇವೆ ಸಲ್ಲಿಸಿದ ಹಿರಿಯ ನಾಯಕ ಇದೀಗ ಕಾಂಗ್ರೆಸ್ ತೊರೆದಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲ ದಿನಗಳಿರುವಾಗಲೇ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ಎದುರಾಗಿದೆ.  

ಮುಂಬೈ(ಫೆ.08) ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ. ಈಗಾಗಲೇ ರಾಜಕೀಯ ವಾಕ್ಸಮರ, ಆಂದೋಲನಗಳು ಜೋರಾಗಿದೆ. ಇದರ ನಡುವೆ ಇಂಡಿಯಾ ಮೈತ್ರಿ ಒಕ್ಕೂಟ ಒಡೆದು ಚೂರಾಗುತ್ತಿದೆ. ಇದೀಗ ಕಾಂಗ್ರೆಸ್ ನಾಯಕರೇ ಪಕ್ಷದಿಂದ ದೂರವಾಗುತ್ತಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್‌ನ ಹಿರಿಯ ನಾಯಕ, ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. 48 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಸಿದ್ದಿಕಿ ಇದೀಗ ದಿಢೀರ್ ಕಾಂಗ್ರೆಸ್ ತೊರೆದಿದ್ದಾರೆ.

ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸೇರಿಕೊಂಡೆ. ಬರೋಬ್ಬರಿ 48 ವರ್ಷಗಳ ಕಾಲ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿದ್ದೇನೆ. ಕಾಂಗ್ರೆಸ್ ಜೊತೆಗಿನ ಸುದೀರ್ಘ ಪಯಣಕ್ಕೆ ವಿರಾಮ ನೀಡುತ್ತಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಕ್ಷಣ ಪರಿಣಾಮದಿಂದ ನಾನು ಪಕ್ಷ ತೊರೆಯುತ್ತಿದ್ದೇನೆ. ನಾನು ಹೇಳಲು ಹಲವು ವಿಷಗಳಿವೆ. ಆದರೆ ಅವರು ಹೇಳುವಂತೆ ಕೆಲ ವಿಷಯಗಳನ್ನು ಹೇಳದೆ ಇರುವುದು ಒಳ್ಳೆಯದು. ನನ್ನ ಪ್ರಯಾಣದ ಭಾಗವಾಗಿರುವ ಎಲ್ಲರಿದೂ ಧನ್ಯವಾದ ಎಂದು ಬಾಬಾ ಸಿದ್ಧಿಕಿ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಅಸ್ಮಿತೆ ಉಳಿಸಲು ಪ್ರಾದೇಶಿಕ ಅಸ್ತ್ರ ಬಳಸಿದ ಸಿಎಂ ಸಿದ್ದರಾಮಯ್ಯ!

ಮಹಾರಾಷ್ಟ್ರ ಎನ್‌ಸಿಪಿ ಪಕ್ಷ ಅಜಿತ್ ಪವಾರ್‌ಗೆ ಸೇರಿದ್ದು ಅನ್ನೋ ತೀರ್ಪು ಹೊರಬಿದ್ದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಶರದ್ ಪವಾರ್ ಹಾಗೂ ಅಜಿತ್ ಪವಾರ್ ನಡುವೆ ಎನ್‌ಸಿಪಿ ಪಕ್ಷ ಯಾರಿಗೆ ಸೇರಿದ್ದು ಅನ್ನೋ ಹೋರಾಟ ಅಂತ್ಯಗೊಂಡಿದೆ. ಶರದ್ ಪವಾರ್ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಬಾಬಾ ಸಿದ್ದಿಕಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಬಾಬಾ ಸಿದ್ದಿಕಿ ಶೀಘ್ರದಲ್ಲೇ ಅಜಿತ್ ಪವಾರ್ ಬಣದ ಎನ್‌ಸಿಪಿ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

 

 

ಸದ್ಯ ಬಾಬಾ ಸಿದ್ದಿಕಿ ಪುತ್ರ ಜೀಶಾನ್ ಕಾಂಗ್ರೆಸ್ ಶಾಸಕನಾಗಿದ್ದಾರೆ. ಇದೀಗ ಜೀಶಾನ್ ಕೂಡ ಅಜಿತ್ ಪವಾರ್ ಬಣ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಯಾವುದೇ ಅದಿಕೃತಗೊಂಡಿಲ್ಲ.  ಇದೀಗ ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಇರುವಾಗ ಕಾಂಗ್ರೆಸ್ ಪಕ್ಷದಿಂದ ನಾಯಕರು ಹೊರಹೋಗುತ್ತಿದ್ದಾರೆ. 

 

ಮೋದಿ ಒಬಿಸಿ ಅಲ್ಲ ಎಂದ ರಾಹುಲ್‌ಗೆ ಪಾರ್ಸಿ ಕ್ಯಾಥೋಲಿಕ್ ನಡುವೆ ಬ್ರಾಹ್ಮಣ ಹೇಗಾಯ್ತು? ನೆಟ್ಟಿಗರ ಪ್ರಶ್ನೆ!

ಇತ್ತ ಇಂಡಿಯಾ ಮೈತ್ರಿ ಒಕ್ಕೂಟದಿಂದ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಹೊರಬಂದಿದ್ದು, ಏಕಾಂಗಿ ಸ್ಪರ್ಧೆ ಘೋಷಿಸಿದೆ. ಇತ್ತ ನೀತೀಶ್ ಕುಮಾರ್ ನೇತೃತ್ವದ ಜೆಡಿಯು ಈಗಾಗಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!