ರಾಯ್‌ಬರೇಲಿಗಿಂತ ಪಾಕ್‌ನ ರಾವಲ್ಪಿಂಡಿಯಿಂದ ಸ್ಪರ್ಧಿಸಲಿ, ರಾಹುಲ್ ಕುಟುಕಿದ ಕಾಂಗ್ರೆಸ್ ಮಾಜಿ ನಾಯಕ!

By Suvarna NewsFirst Published May 4, 2024, 6:05 PM IST
Highlights

ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ. ಇದೀಗ ಕಾಂಗ್ರೆಸ್ ಮಾಜಿ ನಾಯಕ ತೀವ್ರವಾಗಿ ಕುಟುಕಿದ್ದಾರೆ. ರಾಯ್‌ಬರೇಲಿ ಬದಲು ಪಾಕಿಸ್ತಾನದ ರಾವಲ್ಪಿಂಡಿಯಿಂದ ಸ್ಪರ್ಧಿಸಿದರೆ ಒಳೀತು ಎಂದಿದ್ದಾರೆ.
 

ಲಖನೌ(ಮೇ.04) ಲೋಕಸಭಾ ಚುನಾವಣೆಯಲ್ಲಿ ವಯನಾಡು ಬಳಿಕ ಅಮೇಥಿಯಿಂದ ಸ್ಪರ್ಧಿಸದ ರಾಹುಲ್ ಗಾಂಧಿ ಈ ಬಾರಿ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಪಲಾಯನವನ್ನು ಬಿಜೆಪಿ ಗೇಲಿ ಮಾಡಿದೆ. ಇದೀಗ ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್ ಮಾಡಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಮುಗಿ ಬಿದ್ದಿದ್ದಾರೆ. ರಾಹುಲ್ ಗಾಂಧಿ ಜನಪ್ರಿಯತೆ ಭಾರತಕ್ಕಿಂತ ಪಾಕಿಸ್ತಾನದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಗಿಂತ ಪಾಕಿಸ್ತಾನದ ರಾವಲ್ಪಿಂಡಿಯಿಂದ ಸ್ಪರ್ಧಿಸಲಿ ಎಂದು ಆಚಾರ್ಯ ಪ್ರಮೋದ್ ಹೇಳಿದ್ದಾರೆ.

ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ನಿರಾಕರಿಸಿರುವುದಕ್ಕೆ ಕೆರಳಿ ಕೆಂಡವಾಗಿರುವ ಕಾಂಗ್ರೆಸ್ ಮಾಜಿ ನಾಯಕ ಆಚಾರ್ಯ ಪ್ರಮೋದ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಸ್ವಂತ ತಂಗಿಯನ್ನೇ ರಾಜಕೀಯದಿಂದ ಸೈಡ್‌ಲೈನ್ ಮಾಡಿದ್ದಾರೆ. ಗಾಂಧಿ ಕುಟಂಬದ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ. ಪ್ರಿಯಾಂಕಾಗೆ ಟಿಕೆಟ್ ತಪ್ಪಿಸಿ ಗೆಲುವಿಗಾಗಿ ರಾಯ್‌ಬರೇಲಿಗೆ ಪಲಾಯನ ಮಾಡಿದ್ದಾರೆ. ಇದು ರಾಹುಲ್ ಗಾಂಧಿಗಾಗಿ ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯವನ್ನೇ ಬಲಿಕೊಡಲಾಗಿದೆ ಎಂದು ಆಚಾರ್ಯ ಪ್ರಮೋದ್ ಹೇಳಿದ್ದಾರೆ.

ರಾಮ ಮಂದಿರ, ಮೋದಿ ಹೊಗಳಿದ್ದ ಆಚಾರ್ಯರನ್ನ ಪಕ್ಷದಿಂದ ವಜಾಗೊಳಿಸಿದ ಕಾಂಗ್ರೆಸ್

ರಾಹುಲ್ ಗಾಂಧಿ ಜನಪ್ರಿಯತೆ ಭಾರತದಲ್ಲಿ ಹೆಚ್ಚಾಗಿಲ್ಲ. ಆದರೆ ಪಾಕಿಸ್ತಾನದಲ್ಲಿ ಹೆಚ್ಚಾಗಿರುವ ಸಾಧ್ಯತೆ ಇದೆ. ಹೀಗಾಗಿ ರಾಯ್‌ಬರೇಲಿ ಬದಲು ಪಾಕಿಸ್ತಾನದ ರಾವಲ್ಪಿಂಡಿಯಿಂದ ಸ್ಪರ್ಧಿಸಿದರೆ ಗೆಲುವಿನ ಸಾಧ್ಯತೆ ಹೆಚ್ಚು ಎಂದು ಆಚಾರ್ಯ ಪ್ರಮೋದ್ ಹೇಳಿದ್ದಾರೆ. ರಾಹುಲ್ ಗಾಂಧಿ ಅಮೇಥಿಯಿಂದ ದೂರ ಉಳಿದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಹೆಚ್ಚಿಸಿದೆ. ಕಾರಣ ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಿದ್ದಾರೆ. ಇದೀಗ ಏಕಾಏಕಿ ರಾಯ್‌ಬರೇಲಿಗೆ ತೆರಳಿದ್ದಾರೆ. ಇತ್ತ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾ ಗಾಂಧಿ ಪರ ಕೆಲಸ ಮಾಡಿದ್ದಾರೆ. ಇದೀಗ ಪ್ರಿಯಾಂಕಗಾಗಿ ಕೆಲಸ ಮಾಡಿದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ ಎಂದು ಆಚಾರ್ಯ ಪ್ರಮೋದ್ ಹೇಳಿದ್ದಾರೆ.

ಅಮೇಥಿಯಿಂದ ರಾಹುಲ್ ಗಾಂಧಿ ಪಲಾಯನ ಮಾಡುತ್ತಿದ್ದಂತೆ ಅಲ್ಲಿನ ಕಾರ್ಯಕರ್ತರ ಆತ್ಮವಿಶ್ವಾಸಕ್ಕೆ ಧಕ್ಕೆಯಾಗಿದೆ. ಉತ್ಸಾಹ ಕುಗ್ಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾ ಗಾಂಧಿಯನ್ನು ರಾಜಕೀಯ ನಾಯಕಿಯಾಗಿ ನೋಡಲು ಬಯಸುತ್ತಿದ್ದಾರೆ. ಗಾಂಧಿ ಕಟುಂಬದಲ್ಲಿ ಪ್ರಿಯಾಂಕಾ ಗಾಂಧಿ ಹೆಚ್ಚಿನ ವರ್ಚಿಸ್ಸಿದೆ. ಆದರೆ ರಾಹುಲ್ ಗಾಂಧಿಯ ಗೆಲುವಿನ ಓಟಕ್ಕೆ ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯವೇ ಹಾಳಾಗುತ್ತಿದೆ ಎಂದು ಪ್ರಮೋದ್ ಹೇಳಿದ್ದಾರೆ.

ಮೋದಿಯನ್ನು ದ್ವೇಷಿಸುವುದು ಸಲ್ಲದು: ಕಾಂಗ್ರೆಸ್‌ ನಾಯಕ; ರಾಮನನ್ನು ವಿರೋಧಿಸುವವರು ನಾಸ್ತಿಕರು ಎಂದ ಆಚಾರ್ಯ

click me!