ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಪ್ರಕಟವಾಗಿದೆ. ಇದರಲ್ಲಿ ಒಟ್ಟು 46 ಕ್ಷೇತ್ರಗಳ ಅಭ್ಯರ್ಥಿಗಳ ಲಿಸ್ಟ್ ಪ್ರಕಟವಾಗಿದೆ.
ನವದೆಹಲಿ (ಮಾ.23): ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಘೋಷಣೆಯಾಗಿದೆ. ಇದರಲ್ಲಿ ಕರ್ನಾಟಕದ ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಟಿಕೆಟ್‌ಅನ್ನೂ ಘೋಷಣೆ ಮಾಡುವ ನಿರೀಕ್ಷೆ ಇಡಲಾಗಿತ್ತು. ಆದರೆ, ಕಾಂಗ್ರೆಸ್‌ನ ನಾಲ್ಕನೇ ಪಟ್ಟಿಯಲ್ಲಿ ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅಸ್ಸಾಂ, ಅಂಡಮಾನ್, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮಿಜೋರಾಂ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಕ್ಷೇತ್ರಗಳ ಟಿಕೆಟ್ ಪ್ರಕಟಿಸಲಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಡ್ಯಾನಿಶ್ ಅಲಿ ಅವರಿಗೆ ಉತ್ತರ ಪ್ರದೇಶದ ಅಮ್ರೋಹ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ನಟ ಶರತ್ ಕುಮಾರ್ ಪತ್ನಿಗೆ ಬಿಜೆಪಿ ಟಿಕೆಟ್, ಲೋಕಸಭಾ ಚುನಾವಣೆಯ 4ನೇ ಪಟ್ಟಿ ಪ್ರಕಟ!
ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಪಿ ಚಿದಂಬರಂ ಅವರಿಗೆ ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ. ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆ.ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ಬರೇಲಿಗೆ ಈ ಲಿಸ್ಟ್‌ನಲ್ಲಿ ಟಿಕೆಟ್ ಘೋಷಣೆ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಎರಡೂ ಕ್ಷೇತ್ರಗಳಿಗೆ ಇನ್ನೂ ಟಿಕೆಟ್ ಪ್ರಕಟ ಮಾಡಲಾಗಿಲ್ಲ.
5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !
ಸಸಿಕಾಂತ್ ಸೆಂಥಿಲ್‌ಗೆ ಟಿಕೆಟ್: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ಗೆ ಕೂಡ ಟಿಕೆಟ್ ಘೋಷಣೆ ಮಾಡಿದೆ. ತಿರುವಳ್ಳೂರು ಕ್ಷೇತ್ರದಿಂದ ಅವರು ಸ್ಪರ್ಧೆ ಮಾಡಲಿದ್ದಾರೆ. ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿ ಸೆಂಥಿಲ್ ಕೆಲಸ ಮಾಡಿದ್ದರು.