ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ಆಗಸ್ಟ್ 5ಕ್ಕೆ ಕಾಂಗ್ರೆಸ್ ದೇಶಾದ್ಯಂತ ಬೃಹತ್ ಪ್ರತಿಭಟನೆ!

By Suvarna News  |  First Published Jul 30, 2022, 8:36 PM IST

ಪ್ರಧಾನಿ ಮಂತ್ರಿ ನಿವಾಸಕ್ಕೆ ಘೇರಾವ್, ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕ ಚಲೋ ಜೊತೆಗೆ ದೇಶಾದ್ಯಂತ ಪ್ರತಿಭಟನೆಯನ್ನು ಕಾಂಗ್ರೆಸ್ ಆಯೋಜಿಸಿದೆ.
 


ನವದೆಹಲಿ(ಜು.30):  ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದ. ಆಗಸ್ಟ್ 5 ರಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಲೆ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ. ಇದರ ವಿರುದ್ಧ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರಧಾನಿ ನಿವಾಸಕ್ಕೆ ಘೇರಾವ್, ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಚಲೋ ಪ್ರತಿಭಟನೆ ನಡೆಸುತ್ತಿದೆ. ಎಲ್ಲಾ ರಾಜ್ಯದ ರಾಜಧಾನಿ, ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಘಟಾನುಘಟಿ ನಾಯಕರು, ಶಾಸಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಈಗಾಗಲೇ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳಲ್ಲಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿದೆ. ಇದರಿಂದ ಕಲಾಪ ಹಲವು ಬಾರಿ ಮುಂದೂಡಿದ ಘಟನೆಯೂ ನಡೆದಿದೆ.   ಲೋಕಸಭೆಯಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದವು. ‘ಗಬ್ಬರ್‌ಸಿಂಗ್‌ ಸ್ಟೆ್ರೖಕ್ಸ್‌ ಅಗೈನ್‌’ ಎಂಬ ಫಲಕಗಳನ್ನು ಹಿಡಿದು ಸದನದ ಬಾವಿಗಿಳಿದು ವಿಪಕ್ಷ ಸದಸ್ಯರು ಗದ್ದಲವೆಬ್ಬಿಸಿದರು. ಹೀಗಾಗಿ ಮೊದಲು ಮಧ್ಯಾಹ್ನ 2 ಗಂಟೆಗೆ ಹಾಗೂ ನಂತರ ಬುಧವಾರಕ್ಕೆ ಕಲಾಪ ಮುಂದೂಡಿಕೆ ಆಯಿತು. ರಾಜ್ಯಾಸಭೆಯಲ್ಲಿ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ನಂತರವೂ ಗದ್ದಲ ನಡೆದಾಗ ಅಧಿವೇಶನವನ್ನು ಬುಧವಾರಕ್ಕೆ ಮುಂದೂಡಲಾಯಿತು.

Tap to resize

Latest Videos

ಸಂಸತ್ತಿಗೆ ಕಾಂಗ್ರೆಸ್ ಚರ್ಚಿಸಲು ಬಂದಿದೆಯೋ, ಚಿಕನ್ ತಿನ್ನಲು ಬಂದಿದೆಯೋ..? - ಪ್ರಲ್ಹಾದ್ ಜೋಶಿ ಲೇವಡಿ

ಬೆಲೆ ಏರಿಕೆ ಮತ್ತು ಜಿಎಸ್‌ಟಿ ವ್ಯಾಪ್ತಿಗೆ ಹೊಸ ವಸ್ತುಗಳನ್ನು ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಸಂಸತ್‌ ಭವನ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದರು. ಗಾಂಧಿ ಪ್ರತಿಮೆ ಎದರು ಪ್ರತಿಭಟನೆ ನಡೆಸಿದ್ದಾರೆ. ಇದೀಗ ದೇಶಾದ್ಯಂತ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ನಿರ್ಧರಿಸಿದೆ. 

ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರುವ ಮೂಲಕ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನಡೆ ವಿರುದ್ಧ ಆಗಸ್ಟ್ 5ರಂದು ರಾಜ್ಯದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. 

National Herald Case: ಸೋನಿಯಾ ವಿಚಾರಣೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್‌

ಬಿಜೆಪಿ, ಕಾಂಗ್ರೆಸ್‌ ವಾಕ್ಸಮರ:
ಇನ್ನು ಇದೇ ವೇಳೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಹಣದುಬ್ಬರದ ವಿರುದ್ಧ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದೇಶದಲ್ಲಿ ಜೀವನ ವೆಚ್ಚ ಹೆಚ್ಚಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಚರ್ಚೆಯಿಂದ ಹಿಂದೆ ಸರಿಯುತ್ತಿದ್ದಾರೆ. ಹಣದುಬ್ಬರದ ಬಗ್ಗೆ ಚರ್ಚೆ ನಡೆಸುವುದು ಅಸಂವಿಧಾನಿಕವೇ ಎಂದು ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪಿಯೂಶ್‌ ಗೋಯಲ್‌ ಕಾಂಗ್ರೆಸ್‌ ಪ್ರಜಾಪ್ರಭುತ್ವದ ಬಗ್ಗೆ ವಿಧ್ವಂಸಕ ಧೋರಣೆಯನ್ನು ತೋರಿಸುತ್ತಿದೆ. ಬೆಲೆ ಏರಿಕೆ ಮತ್ತು ಜಿಎಸ್‌ಟಿ ಚರ್ಚೆಯಿಂದ ಸರ್ಕಾರ ಎಲ್ಲಿಗೂ ಓಡಿಹೋಗುತ್ತಿಲ್ಲ. ಆದರೆ ಚರ್ಚೆ ನಡೆಸದೇ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಾ ಕಾಲಹರಣ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

click me!