Manipur Violence: ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್‌, ಕೆಸಿಆರ್‌ ಪಕ್ಷ

By BK Ashwin  |  First Published Jul 26, 2023, 11:37 AM IST

ಕಾಂಗ್ರೆಸ್‌ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ. ಕಾಂಗ್ರೆಸ್‌ ಮಾತ್ರವಲ್ಲದೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಹ ಪ್ರತ್ಯೇಕ ಅವಿಶ್ವಾಸ ನಿರ್ಣಯ ಸಲ್ಲಿಸಿದೆ.


ಹೊಸದಿಲ್ಲಿ (ಜುಲೈ 26, 2023): ಮಣಿಪುರ ಗಲಭೆ, ಅತ್ಯಾಚಾರ ಪ್ರಕರಣಗಳ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡಬೇಕೆಂದು ವಿಪಕ್ಷಗಳು ಆಗ್ರಹಿಸುತ್ತಲೇ ಇದೆ. ಇದರ ಜತೆಗೆ, ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕಾಂಗ್ರೆಸ್‌ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ. ಜುಲೈ 20 ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳು ಸಂಸತ್ತಿನ ಉಭಯ ಸದನಗಳಲ್ಲಿ ಕಲಾಪ ಮುಂದೂಡಿಕೆಗೆ ಪ್ರಮುಖ ಕಾರಣವಾಗಿದೆ. ಇನ್ನೊಂದೆಡೆ, ಕಾಂಗ್ರೆಸ್‌ ಮಾತ್ರವಲ್ಲದೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಹ ಪ್ರತ್ಯೇಕ ಅವಿಶ್ವಾಸ ನಿರ್ಣಯ ಸಲ್ಲಿಸಿದೆ.

ಕಾಂಗ್ರೆಸ್‌ ‘I.N.D.I.A’ ಮೈತ್ರಿಕೂಟದ ಪ್ರಮುಖ ಭಾಗವಾಗಿದ್ದು, ಕಾಂಗ್ರೆಸ್‌ನ ಈ ಅವಿಶ್ವಾಸ ನಿರ್ಣಯ ಮಂಡನೆಗೆ ಈ ಮೈತ್ರಿಕೂಟದ ಎಲ್ಲ ಪಕ್ಷಗಳು ಬೆಂಬಲ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ, ತೆಲಂಗಾಣ ಸಿಎಂ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)  ಈ ಒಕ್ಕೂಟದ ಭಾಗವಾಗಿಲ್ಲದ ಕಾರಣ ಪ್ರತ್ಯೇಕವಾಗಿ ಮಂಡನೆ ಮಾಡಿದೆ. 

Tap to resize

Latest Videos

ಇದನ್ನು ಓದಿ: Manipur: ಬಿಎಸ್‌ಎಫ್‌ ಯೋಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ ; ಸಿಸಿ ಕ್ಯಾಮರಾದಲ್ಲಿ ಸೆರೆ

ಇನ್ನು, ಇಂದು ಲೋಕಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಗೆ ಭಾಗಿಯಾಗಲು ಸೂಚನೆ ನೀಡಿತ್ತು. ಸಂಸದೀಯ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಎಲ್ಲ ಸಂಸದರು ಭಾಗಿಯಾಗಬೇಕೆಂದು ಸೂಚನೆ ನೀಡಲಾಗಿತ್ತು. 

ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯವು ಅಂಕಿಅಂಶ ಪರೀಕ್ಷೆಯಲ್ಲಿ ವಿಫಲವಾಗುವುದಾದರೂ, ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಸರ್ಕಾರವನ್ನು ಮೂಲೆಗುಂಪು ಮಾಡುವ ಮೂಲಕ ಗ್ರಹಿಕೆಯ ಯುದ್ಧವನ್ನು ಗೆಲ್ಲುತ್ತೇವೆ ಎಂದು ವಿರೋಧ ಪಕ್ಷಗಳು ವಾದಿಸುತ್ತಿವೆ. ಮಣಿಪುರದ ಪರಿಸ್ಥಿತಿಯ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಾರೆಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ ಸಹ, ಈ ನಿರ್ಣಾಯಕ ವಿಷಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಮಾತನಾಡುವಂತೆ ಮಾಡುವುದು ಒಂದು ತಂತ್ರವಾಗಿದೆ ಎಂದೂ ಅವರು ವಾದಿಸುತ್ತಾರೆ.

ಇದನ್ನೂ ಓದಿ: Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್‌ ಕೇಸ್‌!

ಜುಲೈ 20 ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಉಭಯ ಸದನಗಳನ್ನು ಪದೇ ಪದೇ ಮುಂದೂಡುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗುತ್ತಿದ್ದಾರೆ. ಮಣಿಪುರದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಹೇಳಿದೆ. ಆದರೆ ವಿರೋಧ ಪಕ್ಷಗಳು ಮತದಾನದ ನಿಯಮದ ಅಡಿಯಲ್ಲಿ ಈ ಚರ್ಚೆಗೆ ಒತ್ತಾಯಿಸುತ್ತಿವೆ ಹಾಗೂ ಪ್ರಧಾನಿ ಮೋದಿ ಸಹ ಈ ಬಗ್ಗೆ ಮಾತನಾಡಬೇಕೆಂದು ಆಗ್ರಹಿಸುತ್ತಿವೆ. ಈ ಹಿನ್ನೆಲೆ ಮುಂಗಾರಿನ ಸಂಸತ್‌ ಕಲಾಪ ಆರಂಭವಾಗಿ ಒಂದು ವಾರ ಕಳೆದರೂ ಬರೀ ಗದ್ದಲ, ಗಲಾಟೆ, ಪ್ರತಿಭಟನೆಯೇ ನಡೆಯುತ್ತಿದೆ.

ಮೋದಿ ಸರ್ಕಾರದ ವಿರುದ್ಧ ಸೋಮವಾರದಿಂದ್ಲೂ ಅವಿಶ್ವಾಸ ನಿರ್ಣಯ ಮಂಡನೆಗೆ I.N.D.I.A’ ಒಕ್ಕೂಟ ಚಿಂತಿಸಿದ್ದು, ಇಂದು ಕಾಂಗ್ರೆಸ್‌ ಹಾಗೂ ಕೆಸಿಆರ್‌ ನೇತೃತ್ವದ ಬಿಆರ್‌ಎಸ್‌ ಪಕ್ಷ ಕೊನೆಗೂ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ. 

ಇದನ್ನೂ ಓದಿ: Manipur: ಪೊಲೀಸರಿಂದ ಬಿಡಿಸಿ ಎಳೆದೊಯ್ದು ನಗ್ನ ಪರೇಡ್‌ ಮಾಡಿ ರೇಪ್‌; ಈ ವಿಕೃತ ಘಟನೆಗೆ ಇಲ್ಲಿದೆ ಅಸಲಿ ಕಾರಣ..

click me!