
ನವದೆಹಲಿ(ಜು.09): ಗಾಂಧಿ ಕುಟುಂಬದ ಟ್ರಸ್ಟ್ ಮೇಲೆ ಕೇಳಿಬಂದ ಹಣಕಾಸು ವ್ಯವಹಾರ ಆರೋಪದ ಬೆನ್ನಲ್ಲೇ ಕೇಂದ್ರ ಸರ್ಕಾರ ತನಿಖೆಗೆ ಸಮಿತಿ ರಚಿಸಿದೆ. ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀದಾಟಕ್ಕೆ ವೇದಿಕೆ ಕಲ್ಪಿಸಿದೆ. ಇದೀಗ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ, ಮೋದಿ ಸರ್ಕಾರದ ವಿರುದ್ಧ ಕಡಿ ಕಾರಿದ್ದಾರೆ. ಬಿಜೆಪಿ ಸರ್ಕಾರದ ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸೋನಿಯಾ ಕುಟುಂಬದ ಟ್ರಸ್ಟ್‌ನಲ್ಲಿ ವಿದೇಶಿ ಹಣ..? ತನಿಖೆಗೆ ಸಚಿವರ ತಂಡ ರೆಡಿ.
ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಟಾರಿಟೇಬಲ್ ಟ್ರಸ್ಟ್ ಹಾಗೂ ಇಂದಿರಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ಮೇಲೆ ಬಿಜೆಪಿ ಆರೋಪ ಮಾಡಿತ್ತು. ವಿದೇಶಿ ಅಕ್ರಮ ಹಣ, ಅಕ್ರಮ ಹಣ ವರ್ಗಾವಣೆ, ವಿದೇಶಿ ದೇಣಿ ಸಂಗ್ರಹ ಹಾಗೂ ತೆರಿಗೆ ವಂಚನೆ ಸೇರಿದಂತೆ ಹಣಕಾಸು ಅವ್ಯವಹಾರ ನಡೆಸಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಸಮಿತಿ ಸಚಿಸಿ ತನಿಖೆಗೆ ಆದೇಶಿಸಿದೆ. ಗಾಂಧಿ ಕುಟುಂಬದ ಟ್ರಸ್ಟ್ ಹಾಗೂ ಕಾಂಗ್ರೆಸ್ ಯಾವುದೇ ಸವಾಲು ಎದುರಿಸಲು ಸಿದ್ದ ಎಂದು ಚಿದಂಬರಂ ಹೇಳಿದ್ದಾರೆ.
ಇಂದಿರಾ ಗಾಂಧಿ, ರಾಜೀವ್ ಗಾಂಧಿ ನಿರ್ಭೀತಿಯಿಂದ ಆಡಳಿತ ನಡೆಸಿದ್ದಾರೆ. ಸಾವಿಗೂ ಹೆದರದೆ ಜೀವನ ನಡೆಸಿದ್ದಾರೆ. ಅವರ ಆದರ್ಶಗಳು ನಮಗೆ ಸ್ಪೂರ್ತಿಯಾಗಿದೆ. ನಿರ್ಭೀತತೆಯನ್ನು ಕಲಿತಿರುವ ನಮಗೆ ಮೋದಿ ಸರ್ಕಾರದ ಬೆದರಿಕೆ ಸವಾಲುಗಳಿಗೆ ಹೆದರುವುದಿಲ್ಲ ಎಂದು ಪಿ. ಚಿದಂಬರಂ ಹೇಳಿದ್ದಾರೆ.
ಗಾಂಧಿ ಕುಟುಂಬದ 3 ಟ್ರಸ್ಟ್‌ಗಳಿಗೆ ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾರೆ. ಗಾಂಧಿ ಕುಟುಂಬದ ಟ್ರಸ್ಟ್‌ಗಳಿಗೆ ಚೀನಾದಿಂದ ಅಕ್ರಮವಾಗಿ ಹಣ ಹರಿದುಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಹಾಗೂ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ