ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ

Published : Apr 08, 2025, 08:03 PM ISTUpdated : Apr 09, 2025, 01:07 PM IST
ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ

ಸಾರಾಂಶ

ಕೇಂದ್ರ ಮಾಜಿ ಸಚಿವ, ಪಿ ಚಿದಂಬಂರ ಆರೋಗ್ಯದಲ್ಲಿ ಏರುಪೇರಾಗಿದೆ. ಕಾರ್ಯಕ್ರಮದಲ್ಲಿರುವಾಗಲೇ ಅಸ್ವಸ್ಥಗೊಂಡ ನಾಯಕ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಚಿದಂಬರಂ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.

ಅಹಮ್ಮದಾಬಾದ್(ಏ.08) ಕಾಂಗ್ರೆಸ್ ನಾಯಕ ಪಿ ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಗುಜರಾತ್‌ನ ಸಬರಮತಿ ಆಶ್ರಮಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡ ಪಿ ಚಿದಂಬರಂ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾತ್ಮಾ ಗಾಂಧಿ ಸಬರಮತಿ ಆಶ್ರಮದಲ್ಲಿ ಆಯೋಜಿಸಿದ್ದ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು ಪಾಲ್ಗೊಂಡಿದ್ದರು. ಈ ವೇಳೆ ಘಟನೆ ನಡೆದಿದೆ.

ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆ ಬಳಿಕ ನಡೆದ ಪ್ರಾರ್ಥನಾ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 64 ವರ್ಷದ ಹಿರಿಯ ನಾಯಕ ಪಿ ಚಿದಂಬರಂ ಬಿಸಿನ ಬೇಗೆಯಿಂದ ಕಾರ್ಯಕ್ರಮದ ಆರಂಭದಲ್ಲೇ ಅಸ್ವಸ್ಥರಾಗಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಜ್ಞೆ ತಪ್ಪಿದ ಚಿದಂಬರಂ ಕುಸಿದು ಬಿದ್ದಿದ್ದಾರೆ.  

 

 

ಘಟನೆ ಕುರಿತು ಪುತ್ರ ಕಾರ್ತಿ ಚಿದಂಬಂರ ಮಾಹಿತಿ ನೀಡಿದ್ದಾರೆ. ವಿಪರೀತ ಬಿಸಿಲಿನಿಂದ ಪಿ ಚಿದರಂಬರಂ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಂದೆ ವೈದ್ಯರ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ