
ಲಖನೌ (ಫೆ.12): ಕಾಂಗ್ರೆಸ್ ಪ್ರಧಾನ ಕಾರ‍್ಯದರ್ಶಿ ಪ್ರಿಯಾಂಕಾ ಗಾಂಧಿ ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಅಲಹಾಬಾದ್‌ನ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ಸಂಗಮವು ಗಂಗಾ, ಯಮುನಾ ಮತ್ತು ಸರಸ್ವತಿ ಮೂರೂ ನದಿಗಳು ಕೂಡುವ ಪವಿತ್ರ ಸ್ಥಳವಾಗಿದೆ. ಈ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪುತ್ರಿ ಮತ್ತು ಕಾಂಗ್ರೆಸ್ ಶಾಸಕಿ ಆರಾಧನಾ ಮಿಶ್ರಾ ಅವರೂ ಇದ್ದರು.
ಪವಿತ್ರ ಸ್ನಾನದ ಬಳಿಕ ಆನಂದ ಭವನಕ್ಕೆ ಭೇಟಿ ನೀಡಿ ನಿರ್ಗತಿಕ ಮಕ್ಕಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಹೆಣ್ಣುಮಗುವೊಂದನ್ನು ಮಡಿಲಲ್ಲಿ ಕೂರಿಸಿಕೊಂಡಿದ್ದು ವಿಶೇಷವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ