ಎರಡೂ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ರಾಹುಲ್ ಗಾಂಧಿ

By Mahmad Rafik  |  First Published Jun 4, 2024, 9:30 AM IST

Rahul Gandhi: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 103 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ವಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಕೆ.ಸುರೇಂದ್ರನ್ (K  K Surendran) ಸ್ಪರ್ಧೆ ಮಾಡಿದ್ದಾರೆ. 


ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ವಯನಾಡು (Wayanadu) ಮತ್ತು ರಾಯಬರೇಲಿ (Raebareli) ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ರಾಹುಲ್ ಗಾಂಧಿ ಎರಡನೇ ಬಾರಿ ಇಲ್ಲಿಂದ ಕಣಕ್ಕೆ ಇಳಿದಿದ್ದಾರೆ. ಇತ್ತ ತಾಯಿ ಸೋನಿಯಾ ಗಾಂಧಿ (Sonia Gandhi) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಹಿನ್ನೆಲೆ, ಇಲ್ಲಿಂದಲೂ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದಾರೆ. ರಾಯಬರೇಲಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂದು ಬಿಂಬಿತವಾಗಿದೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 103 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ವಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಕೆ.ಸುರೇಂದ್ರನ್ (K  K Surendran) ಸ್ಪರ್ಧೆ ಮಾಡಿದ್ದಾರೆ. 

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಕೆ.ಸುರೇಂದ್ರನ್ ವಯನಾಡಿನಲ್ಲಿ ರಾಹುಲ್ ಗಾಂಧಿಯವರಿಗೆ ತೀವ್ರ ಸ್ಪರ್ಧೆ ನೀಡಲಿದ್ದಾರೆ. ಅಂತಿಮವಾಗಿ ರಾಹುಲ್ ಗಾಂಧಿ ಗೆಲುವು ಸಾಧಿಸಲಿದ್ದಾರೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಇತ್ತ ರಾಯಬರೇಲಿಯಲ್ಲಿ ಬಹುಜನ ಸಮಾಜ ಪಾರ್ಟಿಯ ಠಾಕೂರ್ ಪ್ರಸಾದ್ ಯಾದವ್ ಪ್ರಬಲ ಅಭ್ಯರ್ಥಿಯಾಗಿದ್ದಾರೆ.

Live Blog: ಚಿಕ್ಕೋಡಿಯಲ್ಲಿ ಕಾಂಗ್ರೆಸ್, ಮೈಸೂರಲ್ಲಿ ಯದುವೀರ್‌ ಮುನ್ನ ...

Tap to resize

Latest Videos

ಏಪ್ರಿಲ್‌ 19 ರಿಂದ ಆರಂಭವಾಗಿದ್ದ 18ನೇ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆದು ಜೂನ್‌ 1 ರಂದು ಮುಕ್ತಾಯವಾಗಿತ್ತು. ಇಂದು ಲೋಕಕದನದ ಮಹಾತೀರ್ಪು ಇಂದು ಹೊರಬೀಳಲಿದೆ. 

ಜಿದ್ದಾಜಿದ್ದಿಯ ಚುನಾವಣೆಯ ಫಲಿತಾಂಶ ದೇಶದ ಕುತೂಹಲ ಕೆರಳಿಸಿದೆ. ಬಿಜೆಪಿಯ ಚಾರ್‌ ಸೌ ಪಾರ್‌ ಎನ್ನುವ ಟಾರ್ಗೆಟ್‌ ನಿಜವಾಗಲಿದೆಯೇ? ಅಥವಾ ಇಂಡಿಯಾ ಮೈತ್ರಿಯ ಅಧಿಕಾರದ ಆಸೆ ಈಡರೇಲಿದೆಯೇ ಅನ್ನೋದು  ತಿಳಿಯಲಿದೆ. ದೇಶದ 543 ಲೋಕಸಭಾ ಕ್ಷೇತ್ರಕ್ಕೆ ಶೇ. 66.33 ರಷ್ಟು ಮತದಾನವಾಗಿದೆ. ಬಿಜೆಪಿ ಒಟ್ಟು 441 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್‌ 328 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಚುನಾವಣಾ ಆರಂಭಕ್ಕೂ ಮುನ್ನವೇ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 

Live Blog: ಮ್ಯಾಜಿಕ್ ನಂಬರ್‌ನತ್ತ ಎನ್‌ಡಿಎ

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಯನಾಡ್‌, ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ, ಗುಜರಾತ್‌ನ ಗಾಂಧಿನಗರದಲ್ಲಿ ಅಮಿತ್‌ ಶಾ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ರಿಸಲ್ಟ್‌ ಬಗ್ಗೆ ಹೆಚ್ಚಿನ ನಿರೀಕ್ಷ ಗರಿಗೆದರಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ ಹೇಗಿರಲಿದೆ, ಉತ್ತರ ಭಾರತದ ಮತದಾರರನ್ನು ಸೆಳೆಯಲು ಇಂಡಿಯಾ ಮೈತ್ರಿ ಯಶಸ್ವಿಯಾಗಿದ್ಯಾ ಅನ್ನೋದು ಇಂದು ತೀರ್ಮಾನವಾಗಲಿದೆ.

click me!