
ನವದೆಹಲಿ (ಮೇ.03): ಕೊರೋನಾ ರಣಕೇಕೆ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಸಂಭವಿಸಿದ ದುರಂತದಲ್ಲಿ ಆಕ್ಸಿಜನ್ ಕೊರತೆಯಿಂದ 24 ಮೃತಪಟ್ಟಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಚಾಮರಾಜನಗರ ಆಕ್ಸಿಜನ್ ದುರಂತ ದೆಹಲಿ ಅಂಗಳಕ್ಕೆ ತಲುಪಿದ್ದು, ಈ ಬಗ್ಗೆ ಟ್ವೀಟ್ ಮಾಡಿ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ದುರಂತದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನೆ ಮಾಡಿದ್ದಾರೆ.
ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು
ಈ ದುರಂತದಂತೆ ಮತ್ತಷ್ಟು ಜನ ಬಳಲಬೇಕು? ಮಲಗಿರುವ ವ್ಯವಸ್ಥೆ ಎದ್ದೇಳಬೇಕು ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 24 ಮಂದಿ ಮೃತಪಟ್ಟಿದ್ದು ಸಾಕಷ್ಟು ಆತಂಕವನ್ನುಂಟು ಮಾಡಿದೆ. ಆಕ್ಸಿಜನ್ ಕೊರತೆಯಿಂದ ಈ ಮಹಾ ದುರಂತ ಸಂಭವಿಸಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ