ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂದರ್ಶನದಲ್ಲಿ ಪಿಎಂ ನರೇಂದ್ರ ಮೋದಿ ಸರ್ಕಾರದ ಕುರಿತು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ನವದೆಹಲಿ: 18ನೇ ಲೋಕಸಭಾ ಚುನಾವಣೆಯಲ್ಲಿ (Lok sabha Election Results) ಬಹುಮತ ಸಾಧಿಸಿ ಸರ್ಕಾರ ರಚಿಸಿರುವ ನರೇಂದ್ರ ಮೋದಿ (PM Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟವು (NDA Government) ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅಭಿಪ್ರಾಯಪಟ್ಟಿದ್ದಾರೆ. ಲಂಡನ್ ಮೂಲದ ಸುದ್ದಿಮಾಧ್ಯಮ ಫಿನಾನ್ಶಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಹುಲ್, ‘ಭಾರತದ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚಿಸಿದ್ದರೂ ಅದಕ್ಕೆ ಸರಳ ಬಹುಮತವಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಸರ್ಕಾರ ಬೀಳುವ ಸಂಭವವಿರುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ತಮ್ಮ ಸರ್ಕಾರ ಉಳಿಸಿಕೊಳ್ಳಲು ಬಿಜೆಪಿ ಶ್ರಮ ಹಾಕುವ ಕಾಲ ಬರುತ್ತದೆ’ ಎಂದು ತಿಳಿಸಿದ್ದಾರೆ.
ಪಕ್ಷಾಂತರ ಪರ್ವ
undefined
‘ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಹಲವೆಡೆ ಒಡೆದಾಳುವ ನೀತಿಯ ಮೂಲಕ ಸರ್ಕಾರ ರಚಿಸಿದ್ದ ಬಿಜೆಪಿಗೆ ಕೇಂದ್ರದಲ್ಲಿ ತಿರುಗುಬಾಣವಾಗಲಿದೆ. ಪ್ರಮುಖವಾಗಿ ಒಂದು ಪ್ರಬಲ ಮಿತ್ರಪಕ್ಷವೇ ತನ್ನ ಬೆಂಬಲ ಹಿಂಪಡೆದರೂ ಕೇಂದ್ರ ಸರ್ಕಾರ ಬಿದ್ದು ಹೋಗಲಿದೆ’ ಎಂದು ಎಚ್ಚರಿಕೆ ನೀಡಿದರು.
ರಾಜಕೀಯ ಅಖಾಡಕ್ಕೆ ಪ್ರಿಯಾಂಕಾ, ಚುನಾವಣೇಲಿ ಸ್ಪರ್ಧಿಸುತ್ತಿರೋ ಗಾಂಧಿ ಕುಟುಂಬದ ಹತ್ತನೇ ಸದಸ್ಯೆ!
ಕೋಮುದ್ವೇಷ ತಿರುಗುಬಾಣ
ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ‘ಬಿಜೆಪಿಯು ಮುಸ್ಲಿಮರನ್ನು ಒಳನುಸುಳುಕೋರರು ಎನ್ನುವ ಮೂಲಕ ಕೋಮುದ್ವೇಷವನ್ನು ಬಿತ್ತಲು ಪ್ರಯತ್ನಿಸಿತು. ಈ ಚುನಾವಣೆಯಲ್ಲಿ ಜನತೆ ಬಿಜೆಪಿಯ ಒಡೆದಾಳುವ ನೀತಿ ಹಾಗೂ ಕೋಮುದ್ವೇಷವನ್ನು ತಿರಸ್ಕರಿಸಿ ತಮ್ಮ ತೀರ್ಪನ್ನು ನೀಡಿದ್ದಾರೆ’ ಎಂದು ತಿಳಿಸಿದರು.
2019ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಹೆಚ್ಚು ಮತಗಳನ್ನು ಗಳಿಸಿದರೆ, ಬಿಜೆಪಿ ಗಳಿಸಿದ ಮತಪ್ರಮಾಣ ಕುಸಿತ ಕಂಡಿದೆ. 2019ರ ಚುನಾವಣೆಗಿಂತ ಈ ಬಾರಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಸ್ಫರ್ಧೆ ಮಾಡಿತ್ತು. ಆದರೂ ಮ್ಯಾಜಿಕ್ ನಂಬರ್‌ನಷ್ಟು ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಬಿಜೆಪಿ ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಕೇಂದ್ರದಲ್ಲಿ ಮೂರನೇ ಬಾರಿ ಸರ್ಕಾರ ರಚನೆ ಮಾಡಿದೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕಾರು ಏರುವ ಮುನ್ನ ಕೆಸರಾದ ಕಾಲನ್ನು ಕಾರ್ಯಕರ್ತನ ಕೈಲಿ ತೊಳೆಸಿಕೊಂಡ ಕಾಂಗ್ರೆಸ್ ಮುಖ್ಯಸ್ಥ: ವೀಡಿಯೋ ವೈರಲ್