
ನವದೆಹಲಿ(ಮಾ.22): ಪಂಚ ರಾಜ್ಯಗಳ ಚುನಾವಣೆ ಸೋಲು, ಜಿ23 ಬಂಡಾಯ ನಾಯಕರ ಆಗ್ರಹ, ದಿ ಕಾಶ್ಮೀರ ಫೈಲ್ಸ್ ಬಾಲಿವುಡ್ ಚಿತ್ರ ವಿಚಾರದಲ್ಲಿನ ಅಸಂಬದ್ದ ಹೇಳಿಕೆಗೆ ಕಾಂಗ್ರೆಸ್‌ಗೆ ಮುಳುವಾಗುತ್ತಿದೆ. ಇದೀಗ ಕಣಿವೆ ರಾಜ್ಯದ ವಿಚಾರದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿಗೆ ಆಕ್ರೋಶ ಹೆಚ್ಚಾಗುತ್ತಿದೆ. ಇದರ ನಡುವೆ ಜಮ್ಮು ಕಾಶ್ಮೀರದ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಕಾರಣ ಮತ್ತದೇ ಕಾಶ್ಮೀರ.
ಜಮ್ಮು ಮತ್ತು ಕಾಶ್ಮೀರ ಜನರ ಭಾವನೆಗಳನ್ನು, ಆಕಾಂಕ್ಷೆಗಳನ್ನು ಅರಿತುಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಜೊತೆಗೆ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ವಿರೋಧದ ನಡುವೆ CPI(M) ಸೆಮಿನಾರ್ ಹಾಜರಾಗಲು ಶಶಿ ತರೂರ್ ಸ್ಪಷ್ಟನೆ, ಕಾಂಗ್ರೆಸ್‌ನಲ್ಲಿ ಜಟಾಪಟಿ!
ಕಾಂಗ್ರೆಸ್ ಹಿರಿಯ ನಾಯಕ ಡಾ.ಕರಣ್ ಸಿಂಗ್ ಪುತ್ರನಾಗಿರುವ ವಿಕ್ರಮಾದಿತ್ಯ ಸಿಂಗ್ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಕಾಶ್ಮೀರದ ಮಹಾರಾಜ ಹರಿ ಸಿಂಗ್ ಮೊಮ್ಮಗನಾಗಿರುವ ವಿಕ್ರಮಾದಿತ್ಯ ದಶಕಗಳ ಕಾಂಗ್ರೆಸ್ ನಂಟನ್ನು ಕಡಿದುಕೊಂಡಿದ್ದಾರೆ.
ಮುಂದಿನ ರಾಜಕೀಯ ನಡೆ ಕುರಿತು ಇನ್ನೂ ನಿರ್ಧರಿಸಿಲ್ಲ. ಕೆಲ ದಿನಗಳ ಬಳಿಕ ರಾಜಕೀಯ ನಿರ್ಧಾರ ಬಹಿರಂಗ ಪಡಿಸುವುದಾಗಿ ಹೇಳಿದ್ದಾರೆ. 57ರ ಹರೆಯದ ವಿಕ್ರಮಾದಿತ್ಯ ಸಿಂಗ್ 2019ರಲ್ಲಿ ಉದಮಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಮುಗ್ಗರಿಸಿದ್ದರು.
ಪಾದಯಾತ್ರೆಯ ಹುಮ್ಮಸ್ಸಿನಿಂದಿದ್ದ ಕಾಂಗ್ರೆಸ್ ಕುಗ್ಗುವಂತೆ ಮಾಡಿದ್ದು ಆ ನಾಲ್ಕು ಫೈಲ್ಸ್!
ಮಾಧ್ಯಮದ ಜೊತೆ ಮಾತನಾಡಿರುವ ವಿಕ್ರಮಾದಿತ್ಯ ಸಿಂಗ್, ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸೂಕ್ತ ಸ್ಥಾನಮಾನ ನೀಡುವ, ಜವಾಬ್ದಾರಿ ನೀಡುವ ವಿಚಾರದಲ್ಲೂ ಕಾಂಗ್ರೆಸ್ ನಿರ್ಲಕ್ಷ್ಯ ವಹಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳಿಗೆ ಸ್ಪಂದಿಸಿದ್ದೇನೆ. ಹಲವು ಬಾರಿ ಕಾಂಗ್ರೆಸ್ ಪಕ್ಷದ ಧೋರಣೆಗಳಿಂದ ತೊಡಕಾಗಿದೆ. ರಾಷ್ಟ್ರೀಯತೆ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಮೊದಲು ಸ್ವಾಗತಿಸಿದ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಇದು ಅವಶ್ಯಕ ಎಂದಿದ್ದರು. ಆದರೆ ಕಾಂಗ್ರೆಸ್ ತದ್ವಿರುದ್ಧ ಹೇಳಿಕೆ ನೀಡಿ ಕಾಶ್ಮೀರಿ ಜನರ ಭಾವನೆಗೆ ಘಾಸಿ ಮಾಡಿತ್ತು.
ವಿಕ್ರಮಾದಿತ್ಯ ಸಿಂಗ್ ಬಿಜೆಪಿ ಸೇರಿಕೊಳ್ಳುವ ಕುರಿತು ಮಾತುಗಳು ಕೇಳಿಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಂಗ್, ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ವಿಕ್ರಮಾದಿತ್ಯ ಸಿಂಹ್ ಹೇಳಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ
ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಆಮ್ ಆದ್ಮಿ ಅಬ್ಬರಕ್ಕೆ ಸಿಲುಕಿ ಧೂಳೀಪಟವಾಗಿತ್ತು. ಇನ್ನು ಮಣಿಪುರ, ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಖಂಡದಲ್ಲೂ ಕಾಂಗ್ರೆಸ್ ಮುಖಭಂಗ ಅನುಭವಿಸಿತ್ತು. ಈ ಸೋಲಿನ ಬಳಿಕ ಜಿ23 ನಾಯಕರ ಅಸಮಾಧಾನ ಹೆಚ್ಚಾಗಿತ್ತು. ಮೇಲಿಂದ ಮೇಲೆ ಸಭೆ ನಡೆಸಿ ನಾಯಕತ್ವ ಬದಲಾವಣೆಗ ಆಗ್ರಹಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ