
ಮುಂಬೈ: ಠಾಕ್ರೆ ಸಹೋದರರ ಮೈತ್ರಿಯಿಂದ ಮಹಾರಾಷ್ಟ್ರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿರುವ ನಡುವೆಯೇ ಮಹಾರಾಷ್ಟ್ರದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಬೇಕು ಎನ್ನುವ ಕೂಗು ಪಕ್ಷದಲ್ಲಿಯೇ ಕೇಳಿ ಬಂದಿದೆ.
ಒಂದು ಕಾಲದಲ್ಲಿ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಈಗ ಬಿಜೆಪಿ ಅಲೆಯಿಂದ ತನ್ನ ನೆಲೆ ಕಳೆದುಕೊಂಡಿದೆ. ಕಮಲ ಪಾಳಯದ ವರ್ಚಸ್ಸು ವ್ಯಾಪಕವಾಗಿರುವ ಸ್ಥಳೀಯ ಸಂಸ್ಥೆಗಳನ್ನು ತಮ್ಮ ಅಸ್ತಿತ್ವವನ್ನು ಮರಳಿ ಪಡೆಯಲು ಮತ್ತು ಪಕ್ಷವನ್ನು ಬಲ ಪಡಿಸಲು ಸ್ವತಂತ್ರವಾಗಿ ಸ್ಪರ್ಧಿಸದರೆ ಒಳಿತು ಎಂದು ಪಕ್ಷದ ಹಲವರು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸದ್ಯ ಮಹಾರಾಷ್ಟ್ರದಲ್ಲಿ ಶರದ್ ಪವಾರ್ ಎನ್‌ಸಿಪಿ, ಉದ್ಧವ್ ಠಾಕ್ರೆ ಶಿವಸೇನೆ( ಯುಬಿಟಿ) ಒಳಗೊಂಡ ಮಹಾ ವಿಕಾಸ್ ಅಘಾಡಿ ಮೈತ್ರಿ ಕೂಟದಲ್ಲಿ ಕಾಂಗ್ರೆಸ್ ಇದೆ. ಈ ಕೂಟದಲ್ಲಿ ಆಗಾಗ ಅಸಮಾಧಾನ ಹೊಗೆಯಾಡುತ್ತಲೇ ಇತ್ತು. ಈ ನಡುವೆ ಉದ್ಧವ್ ಮತ್ತು ರಾಜ್ ಠಾಕ್ರೆ ನಡುವೆ ಏರ್ಪಟ್ಟಿರುವ ಬಾಂಧವ್ಯ ಬಿರುಕನ್ನು ಮತ್ತಷ್ಟು ಹೆಚ್ಚಿಸಿದೆ.
ಹೀಗಾಗಿ ಕಾಂಗ್ರೆಸ್‌ನಲ್ಲಿ ಹೊಸ ಕೂಗು ಕೇಳಿ ಬಂದಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು. ಒಂದು ವೇಳೆ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾದರೆ ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳಬಹುದು ಎನ್ನುವ ಒತ್ತಾಯ ಪಕ್ಷದ ಹಲವರದ್ದು. ಆದರೆ ಹೈಕಮಾಂಡ್ ಇನ್ನು ಯಾವ ನಿರ್ಧಾರ ಕೈಗೊಂಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ