ವಿಧಾನಸಭೆಯಲ್ಲಿ ಸ್ಪೀಕರ್‌ಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಶಾಸಕ!

Published : Nov 20, 2019, 11:23 AM IST
ವಿಧಾನಸಭೆಯಲ್ಲಿ ಸ್ಪೀಕರ್‌ಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಶಾಸಕ!

ಸಾರಾಂಶ

ಒಡಿಶಾ ವಿಧಾನಸಭೆಯಲ್ಲಿ ಸ್ಪೀಕರ್‌ಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಕಾಂಗ್ರೆಸ್‌ ಶಾಸಕ| ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್, ನೆಟ್ಟಿಗರಿಂದ ಟ್ರೋಲ್

ಭುವನೇಶ್ವರ್‌[ನ.20]: ಸದನಲ್ಲಿ ಸದಸ್ಯರು ಗದ್ದಲ ಗಲಾಟೆ ಎಬ್ಬಿಸುವುದು ಸಾಮಾನ್ಯ. ಆದರೆ, ಇದಕ್ಕೆ ತದ್ವಿರುದ್ಧ ಎಂಬಂತೆ ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಶಾಸಕ ತಾರಾ ಪ್ರಸಾದ್‌ ಭಾಹಿನಪತಿ ಎನ್ನುವವರು ತಮಗೆ ಪ್ರಶ್ನೆ ಕೇಳಲು ಅವಕಾಶ ನೀಡಿದ್ದಕ್ಕೆ ಸ್ಪೀಕರ್‌ಗೆ ಫ್ಲೈಯಿಂಗ್‌ ಕಿಸ್‌ ನೀಡಿ ಗಮನ ಸೆಳೆದಿದ್ದಾರೆ.

ಇದರಿಂದ ಇಡೀ ಸದನ ಒಮ್ಮೆ ನಗೆಗಡಲಲ್ಲಿ ಮುಳುಗಿತು. ಈ ಬಗ್ಗೆ ಸ್ಪಷ್ಟನೆ ನೀಡಿದ ಭಾಹಿನಪತಿ, ಎಲ್ಲರೂ ಪ್ರಶ್ನೆ ಕೇಳಲು ಎದ್ದು ನಿಂತಾಗ ತಮಗೇ ಮೊದಲು ಪ್ರಶ್ನೆ ಕೇಳಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಕೃತಜ್ಞತೆ ಸೂಚಿಸಲು ಸ್ಪೀಕರ್‌ ಎಸ್‌.ಎನ್‌. ಪತ್ರೋ ಅವರಿಗೆ ಫ್ಲೈಯಿಂಗ್‌ ಕಿಸ್‌ ನೀಡಿದೆ. ನನ್ನ ಬಗ್ಗೆ ಯಾರೂ ತಪ್ಪಾಗಿ ಭಾವಿಸಬಾರದು ಎಂದು ಹೇಳಿದರು.

ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕಣ್ಣು ಹೊಡೆದು ಮುಜುಗರಕ್ಕೀಡಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಾಹಿತ್ಯಾಸಕ್ತರ ಸಮ್ಮುಖದಲ್ಲಿ ಜೈಪುರ ಸಾಹಿತ್ಯೋತ್ಸವ ಶುರು
India News Live: ಇಂದು ಮುಂಬೈ ಪಾಲಿಕೆ ಚುನಾವಣೆಯ ಮತ ಎಣಿಕೆ, ಯಾರಿಗೆ ಗೆಲುವು?