ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ| ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್| ಸಂವಿಧಾನದ 14ನೇ ವಿಧಿ ಉಲ್ಲಂಘನೆಯ ಆಪಾದನೆ ಹೊರಿಸಿದ ಕಾಂಗ್ರೆಸ್| ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಕಾಂಗ್ರೆಸ್ ಆಗ್ರಹ| ‘ಕಾಯ್ದೆಯಿಂದ ಸಂವಿಧಾನದ ಮೂಲಭೂತ ವಿಚಾರಗಳ ಮೇಲೆ ಹಲ್ಲೆಯಾಗಿದೆ’|
ನವದೆಹಲಿ(ಡಿ.13): ಮಹತ್ವದ ಬೆಳವಣಿಗೆಯೊಂದರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಸಿಂಧುತ್ವದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕಾಯ್ದೆ ಸಂವಿಧಾನದ 14ನೇ ವಿಧಿ ಉಲ್ಲಂಘಿಸುತ್ತದೆ ಎಂದು ಆಪಾದಿಸಿ ಕಾಂಗ್ರೆಸ್ ದಾವೆ ಹೂಡಿದೆ.
ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇಂದಿನಿಂದಲೇ ಕಾನೂನು ಜಾರಿ!
ಕಾನೂನಿನ ಮುಂದೆ ಯಾವುದೇ ವ್ಯಕ್ತಿಗೆ ಸಮಾನತೆಯನ್ನು ರಾಜ್ಯವು ನಿರಾಕರಿಸುವಂತಿಲ್ಲ ಅಥವಾ ದೇಶದೊಳಗೆ ಕಾನೂನಿನಡಿ ಸಮಾನ ರಕ್ಷಣೆ ನೀಡಬೇಕೆಂದು ಭಾರತ ಸಂವಿಧಾನದ 14ನೇ ವಿಧಿಯಲ್ಲಿ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಯ್ದೆ ಪ್ರಶ್ನಾರ್ಹವಾಗಿದ್ದು, ಈ ಕುರಿತು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳ ಭಯ ಅನಗತ್ಯ
The CAB is a brazen assault on the fundamental ideas enshrined in the Constitution.
The fate of the law will be decided in the Supreme Court.
ಪೌರತ್ವ ಕಾಯ್ದೆಯಿಂದ ಸಂವಿಧಾನದ ಮೂಲಭೂತ ವಿಚಾರಗಳ ಮೇಲೆ ಹಲ್ಲೆಯಾಗಲಿದ್ದು, ಸುಪ್ರೀಂಕೋರ್ಟ್’ನಲ್ಲಿ ಕಾಯ್ದೆಯ ಭವಿಷ್ಯ ನಿರ್ಧಾರವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!