ಇಂಡಿಯಾ ಮೈತ್ರಿಯಿಂದ ಹೊರಬಂದಿರುವ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕೆಲ ಕಾರಣಗಳನ್ನೂ ನೀಡಿದ್ದಾರೆ.
ಕೋಲ್ಕತಾ(ಫೆ.02) ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇಂಡಿಯಾ ಮೈತ್ರಿ ಒಕ್ಕೂಟದ ಲೆಕ್ಕಾಚಾರಗಳು ಉಲ್ಟಾ ಹೊಡೆಯುತ್ತಿದೆ. ಆಪ್ತರು ಕಾಂಗ್ರೆಸ್ ವಿರುದ್ದ ತಿರುಗಿಬಿದ್ದಿದ್ದಾರೆ. ಮೈತ್ರಿಯಿಂದ ಹೊರಬಂದು ಏಕಾಂಗಿ ಸ್ಪರ್ಧಿ ಘೋಷಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇದೀಗ ಕಾಂಗ್ರೆಸ್ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ 40 ಸ್ಥಾನ ಗೆಲ್ಲುವುದು ಅನುಮಾನ ಎಂದುಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಮತಾ ಭವಿಷ್ಯ ನುಡಿಯುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶದ ಜೊತೆಗೆ ಆತಂಕವೂ ಎದುರಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಅನುಮಾನ. ಇಂಡಿಯಾ ಮೈತ್ರಿ ಒಕ್ಕೂಟದ ಮಾತುಕತೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ಗೆ 2 ಸ್ಥಾನ ನೀಡುವ ಪ್ರಸ್ತಾಪ ಮುಂದಿಟ್ಟಿದೆ. ಆದರೆ ಕಾಂಗ್ರೆಸ್ ಹೆಚ್ಚು ಸ್ಥಾನದ ಬೇಡಿಕೆ ಮುಂದಿಟ್ಟಿತು. ಇದಕ್ಕೆ ಪಶ್ಚಿಮ ಬಂಗಾಳದ ಎಲ್ಲಾಾ 42 ಸ್ಥಾನದಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ಎಂಬ ಮಾತನ್ನು ಹೇಳಿದ್ದೆ. ಈ ಮಾತು ಹೇಳಿದ ಬಳಿಕ ಕಾಂಗ್ರೆಸ್‌ನಿಂದ ಯಾವುದೇ ಮಾತುಕತೆ ಇರಲಿಲ್ಲ ಎಂದು ಮಮತಾ ಬ್ಯಾನರ್ಜಿ ಸೀಟು ಹಂಚಿಕೆ ಸೀಕ್ರೆಟ್ ಬಹಿರಂಗ ಪಡಿಸಿದ್ದಾರೆ.
ಇಂಡಿಯಾ ಮೈತ್ರಿ ಮುರಿದು ಏಕಾಂಗಿ ಸ್ಪರ್ಧೆ ಘೋಷಿಸಿದ ಬೆನ್ನಲ್ಲೇ ಮಮತಾ ಕಾರು ಅಪಘಾತ!
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆದ್ದಿದೆ? ಇದಕ್ಕೂ ಮಿಗಿಲಾಗಿ 2 ಸ್ಥಾನ ನೀಡಲಾಗಿದೆ. ಆದರೆ ಕಾಂಗ್ರೆಸ್ ಪ್ರತಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನದ ಬೇಡಿಕೆ ಇಡುತ್ತಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳ ಪ್ರವೇಶ ಕುರಿತು ರಾಹುಲ್ ಗಾಂಧಿಯಾಗಲಿ, ಕಾಂಗ್ರೆಸ್ ಆಗಲಿ ಯಾವುದೇ ಸೂಚನೆ ನೀಡಿಲ್ಲ. ಪಶ್ಚಿಮ ಬಂಗಾಳ ಆಡಳಿತಾಧಿಕಾರಿಗಳಿಂದ ಮಾಹಿತಿ ಸಿಕ್ಕಿತ್ತು. ಇತ್ತ ಟಿಎಂಸಿ ಸಂಸದ ಡರೆಕ್ ಒಬ್ರಿಯಾನ್‌ಗೆ ಕರೆ ಮಾಡಿ ಯಾತ್ರೆಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದರು. ಆದರೆ ನನ್ನ ಬಳಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ಗೆ ತಾಖತ್ತಿದ್ದರೆ ಬನಾರಸ್‌ನಲ್ಲಿ ಬಿಜೆಪಿ ವಿರುದ್ಧ ಗೆದ್ದು ತೋರಿಸಲಿ ಎಂದು ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ವಿರುದ್ದ ಕಾಂಗ್ರೆಸ್ ಗೆಲುವಿನ ಧೈರ್ಯ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.
ಇಂಡಿಯಾ ಮೈತ್ರಿ ಚೂರು ಚೂರು, ಪಂಜಾಬ್‌ನಲ್ಲಿ ಮೈತ್ರಿ ಇಲ್ಲ ಏಕಾಂಗಿ ಹೋರಾಟ ಘೋಷಿಸಿದ ಆಪ್!