
ಕೋಲ್ಕತಾ(ಎ.05): ಪಂಚ ರಾಜ್ಯ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ ಕದನ ಕಣ ರಣರೋಚಕವಾಗಿದೆ. ಮೊದಲ ಮತದಾನ ಶಾಂತವಾಗಿದ್ದರೂ, ಎರಡನೇ ಹಂತದ ಮತದಾನದಲ್ಲಿ ಹಿಂಸೆ ಭುಗಿಲೆದ್ದಿದೆ. ಅಧಿಕಾರ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಯತ್ನಿಸಿದ್ದರೆ, ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೇರುವ ಪ್ರಯತ್ನದಲ್ಲಿದೆ. ಇಬ್ಬರ ಜಗಳ ಮೂರನೇಯವರಿಗೆ ಲಾಭ ಅನ್ನೋ ರೀತಿ ಕಾಂಗ್ರೆಸ್ ಸದ್ದಿಲ್ಲದೆ ಗೇಮ್ ಪ್ಲಾನ್ ರೂಪಿಸಿ ಮಮತಾ ಬ್ಯಾನರ್ಜಿ ಮುಂದಿಟ್ಟಿದೆ.
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ, ಬರ್ಹಾಂಪೋರ್ ಸಂಸದ ಅಧೀರ್ ರಂಜನ್ ಚೌಧರಿ, ಹೊಸ ಪ್ಲಾನ್ ಮಾಡಿದ್ದಾರೆ. ಬಂಗಾಳದಲ್ಲಿ ಈಗಾಗಲೇ ಅಸ್ಥಿತ್ವ ಕಳೆದುಕೊಳ್ಳುತ್ತಿದ್ದ ಕಾಂಗ್ರೆಸ್ ಎಡಪಕ್ಷಗಳ ಜೊತೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ. ಇದರ ರೂವಾರಿ ಅಧೀರ್ ರಂಜನ್ ಚೌಧರಿ, ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರವೇಶವನ್ನು ತಡೆಯಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಜೊತೆ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸಿದೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ಕಾಂಗ್ರೆಸ್ ಯಾವ ನಿರ್ದಿಷ್ಠ ಖಾತೆಯನ್ನು ಕೇಳುವುದಿಲ್ಲ. ಬದಲಾಗಿ ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿನ ಒಟ್ಟು 22 ಟಿಎಂಸಿ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹಿಂದೆ ಸರಿಸಬೇಕು ಎಂಬ ಷರತ್ತನ್ನು ಮಮತಾ ಬ್ಯಾನರ್ಜಿ ಮುಂದೆ ಇಟ್ಟಿದೆ.
ಟಿಎಂಸಿ ಅಭ್ಯರ್ಥಿಗಳಿಂದ ಅಲ್ಪಸಂಖ್ಯಾತ ಮತಗಳು ವಿಭಜನೆಯಾಗಲಿದೆ. ಹೀಗಾದಲ್ಲೇ 22 ಕ್ಷೇತ್ರಗಳಲ್ಲಿ ಬಿಜೆಪಿ ಲಾಭ ಪಡೆಯಲಿದೆ. ಹೀೀಗಾಗಿ ಈ ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳನ್ನು ಹಿಂಪಡೆದರೆ, ಕಾಂಗ್ರೆಸ್ ಗೆಲುವು ನಿಶ್ಟಿತ. ಇಷ್ಟೇ ಅಲ್ಲ ಮಮತಾ ಬ್ಯಾನರ್ಜಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ನಂದೀಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಸೋಲಿನ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಮಮತಾ ಬ್ಯಾನರ್ಜಿ ಎಡಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಹೋರಾಡಬೇಕು. ಇದಕ್ಕೆ ಬೆಂಬಲ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬಳಿಕ ಇದೀಗ ಅಧೀರ್ ರಂಜನ್ ಚೌಧರಿ, ಈ ಒಪ್ಪಂದ ಪ್ರಸ್ತಾಪವನ್ನು ಮಮತಾ ಬ್ಯಾನರ್ಜಿ ಮುಂದಿಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ