
ನವದೆಹಲಿ (ನ.06) ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹಾಗೂ ವಿಪಕ್ಷಗಳು ವೋಟ್ ಚೋರಿ ಹೋರಾಟ ನಡೆಸಿದೆ. ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಹೋರಾಟ ನಡೆಸಿತ್ತು. ಇದೀಗ ದೆಹಲಿಯಲ್ಲಿ ಮತ್ತೊಂದು ಬೃಹತ್ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇಂದು ರಾಹುಲ್ ಗಾಂಧಿ ಆಯೋಜಿಸಿದ್ದ ದೀಪಾವಳಿ ಮಿಲನ್ ಚಹಾ ಕೂಟ ಕಾರ್ಯಕ್ರಮದಲ್ಲಿ ಪ್ರಮುಖ ನಿರ್ಧಾರವೊಂದು ಹೊರಬಿದ್ದಿದೆ.
ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ ಭಾರಿ ಹೋರಾಟ ರೂಪಿಸುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ರಣ ಕಹಳೆ ಮೊಳಗಿಸಲು ವಿಪಕ್ಷಗಳು ಸಜ್ಜಾಗುತ್ತಿದೆ. ಸಂವಿಧಾನ ಬಚಾವೋ ಹೋರಾಟಕ್ಕೆ ನೇತೃತ್ವ ವಹಿಸಲು ಕಾಂಗ್ರೆಸ್ ಸಜ್ಜಾಗಿದೆ. ನವೆಂಬರ್ 26ಕ್ಕೆ ದೆಹಲಿಯಲ್ಲಿ ಸಂವಿಧಾನ ಬಚಾವೋ ಹೋರಾಟದ ಕುರಿತು ಇಂದಿನ ಚಹಾ ಕೂಟದಲ್ಲಿ ನಾಯಕರು ಚರ್ಚಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ದೆಹಲಿಗೆ ಬರಲು ಸಜ್ಜು ಮಾಡುವಂತೆ ಉಸ್ತುವಾರಿ ಗಳಿಗೆ, ಪಿಸಿಸಿ ಗಳಿಗೆ ಸೂಚನೆ ನೀಡಲಾಗಿದೆ. ದೆಹಲಿಗೆ ಬರುವ ಕಾರ್ಯಕರ್ತರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸೂಚಿಸಲಾಗಿದೆ.
ಮೋದಿ ಸರ್ಕಾರ ಸಂವಿಧಾನ ಬದ್ಧವಾಗಿ ನಡೆದುಕೊಳ್ಳುತ್ತಿಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟಿದ್ದಾರೆ. ಚುನಾವಣಾ ಆಯೋಗ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಮೂಲಕ ಬಿಜಿಪಿ ಮತ ಕಳ್ಳತನ ಮಾಡುತ್ತಿದೆ. ಸಾಂವಿಧಾನಿಕ ಸಂಸ್ಥೆಯನ್ನು ತನ್ನ ಕೈಗೊಂಬೆಯಂತೆ ಆಡಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯಿಂದ, ನರೇಂದ್ರ ಮೋದಿ, ಅಮಿತ್ ಶಾರಿಂದ ಈ ದೇಶವನ್ನು ಸಂವಿಧಾನವನ್ನು ರಕ್ಷಿಸಬೇಕಿದೆ. ಹೀಗಾಗಿ ಸಂವಿದಾನ ಬಚಾವೋ ಹೋರಾಟ ಅತ್ಯಗತ್ಯ ಅನ್ನೋ ಅಭಿಪ್ರಾಯಗಳು ಇಂದಿನ ದೀಪಾವಳಿ ಮಲಿನ್ ಚಹಾ ಕೂಟದಲ್ಲಿ ವ್ಯಕ್ತವಾಗಿದೆ.
ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ದೇಶದಲ್ಲಿ ಸಂವಿಧಾನ ಉಳಿಸಿಕೊಂಡು ಬರುತ್ತಿದೆ. ಆದರೆ ಕಳೆದ 10 -12 ವರ್ಷದಲ್ಲಿ ಮೋದಿ ಸರ್ಕಾರ ಸಂವಿಧಾನ ಆಶಯಗಳಿಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ. ಜನರ ಆಕ್ರೋಶಕ್ಕೆ ಧನಿಯಾಗುವ ಮೂಲಕ ಮೋದಿ ವಿರುದ್ಧ ಪ್ರಬಲ ಅಸ್ತ್ರ ಪ್ರಯೋಗಿಸಬೇಕು ಅನ್ನೋ ಮಾತುಗಳು ಇಂದಿನ ಚಹಾಕೂಟದಲ್ಲಿ ವ್ಯಕ್ತವಾಗಿದೆ.
ನವೆಂಬರ್ 1ರಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇದರ ಬೆನ್ನಲ್ಲೇ ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ದೆಹಲಿಯಲ್ಲಿ ಸೇರುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ