ಉತ್ತರ ಪ್ರದೇಶ(ಅ.22): ಭಾರತದಲ್ಲಿ ಭಯೋತ್ಪಾದನೆಯನ್ನು ಹುಟ್ಟುಹಾಕಿದ್ದು ಕಾಂಗ್ರೆಸ್. 1952ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿ ಮಾಡುವ ಮೂಲಕ ಭಾರತದಲ್ಲಿ ಉಗ್ರ ಚಟುವಟಿಕೆಗೆ ಕಾಂಗ್ರೆಸ್ ಮುಕ್ತ ಅವಕಾಶ ಕಲ್ಪಿಸಿತ್ತು. ಇದೀಗ ಇದೇ ಭಯೋತ್ಪಾದನೆ ಹೆ್ಮೆರವಾಗಿ ಬೆಳೆದು ನಿಂತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಭಯೋತ್ಪಾದನೆಯ ತಾಯಿ; ಯೋಗಿ ಆದಿತ್ಯನಾಥ್ ಗಂಭೀರ ಆರೋಪ!
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿ ಭಾರತದಿಂದ ಪ್ರತ್ಯೇಕಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿತು. ಇದೇ ವೇಳೆ ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ದೇಶದಲ್ಲಿ ನೆಟ್ಟಿತು. ಇದು ಈಗ ಹೆಮ್ಮರವಾಗಿ ಬೆಳೆದು ನಿಂತಿದೆ. ಆದರೆ ಬಿಜೆಪಿ ಸರ್ಕಾರ ಆರ್ಟಿಕಲ್ 370 ರದ್ದು ಮಾಡಿ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಬಿಜೆಪಿ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ. ಬಿಜೆಪಿ ರಾಜ್ಯದಲ್ಲಿ ಗಲಭೆ ಸೃಷ್ಟಿ, ದೊಂಬಿ ಸೃಷ್ಟಿಸಲು ಅವಕಾಶ ನೀಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಯಾರಿಗೂ ಗಲಭೆ ಸೃಷ್ಟಿಸುವ ಧೈರ್ಯವಿರುವಿದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಪ್ಯಾರಾಒಲಿಂಪಿಕ್ಸ್ ಪದಕ: ನೆಚ್ಚಿನ ಜಿಲ್ಲಾಧಿಕಾರಿ ಕನ್ನಡಿಗ ಸುಹಾಸ್ ಅಭಿನಂದಿಸಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ಕೆಲ ಘಟನೆಗಳನ್ನು ಹಿಡಿದು ವಿರೋಧ ಪಕ್ಷಗಳು ದೊಂಬಿ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದೆ. ಆದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 350 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಯೋಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
., पिछड़ा वर्ग मोर्चा द्वारा आयोजित 'सामाजिक प्रतिनिधि सम्मेलन' में... https://t.co/gUr4xlikGO
— Yogi Adityanath (@myogiadityanath)ಇದೇ ವೇಳೆ ಸಮಾಜವಾದಿ ಪಕ್ಷದ ವಿರುದ್ಧ ಯೋಗಿ ಹರಿಹಾಯ್ದಿದ್ದಾರೆ. ಎಸ್‌ಪಿ ಅಧಿಕಾರದಲ್ಲಿದ್ದಾರೆ ಭಯೋತ್ಪಾದಕರೂ, ಗೂಂಡಗಾಗಳಿಗೆ ವಿಶೇಷ ಸ್ಥಾನ ಮಾನ ನೀಡಲಾಗಿತ್ತು. ಅವರ ಮೇಲಿನ ಪ್ರಕರಣಗಳನ್ನು ರದ್ದು ಮಾಡಿತ್ತು. ಹಿಂದೂಗಳ ಮೇಲೆ ಇಲ್ಲ ಸಲ್ಲದ ಕೇಸ್ ದಾಖಲಿಸಿತ್ತು. ಇದು ಸಮಾಜವಾದಿ ಪಕ್ಷದ ಆಡಳಿತ ಎಂದು ಯೋಗಿ ಹೇಳಿದ್ದಾರೆ.
ಇನ್ನು ಇದೆ ಮೋದಿ ಅಲೆ, ಉತ್ತರದಲ್ಲಿ ಭದ್ರವಾಯ್ತಾ ಯೋಗಿ ನೆಲೆ?ಏಷ್ಯಾನೆಟ್ ಸುವರ್ಣನ್ಯೂಸ್ ಸಮೀಕ್ಷೆ!
ಕಳೆದ 35 ವರ್ಷಗಳಲ್ಲಿ ಉತ್ತರ ಪ್ರದೇಶ ಕಾಣದ ಅಭಿವೃದ್ಧಿಯನ್ನು ಇದೀಗ ಯುಪಿ ಕಂಡಿದೆ. ಬಿಜೆಪಿ ಆಡಳಿತದಲ್ಲಿ ಮುಂದಿನ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ. ಹೊಸ ಅಧ್ಯಾಯ ಆರಂಭಗೊಳ್ಳಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮೋದಿ ತೆಗೆದುಕೊಂಡು ನಿರ್ಧಾರಗಳ ಫಲವಾಗಿ ಕಣಿವೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಎಂದು ಯೋಗಿ ಹೇಳಿದ್ದಾರೆ.