ಸೋನಿಯಾ ಗಾಂಧಿಗೆ ಕೊರೋನಾ, ಕೆ. ಸಿ. ವೇಣುಗೋಪಾಲ್ ಸೇರಿ ಹಲವು ನಾಯಕರಿಗೆ ಸೋಂಕು!

Published : Jun 02, 2022, 04:56 PM IST
ಸೋನಿಯಾ ಗಾಂಧಿಗೆ ಕೊರೋನಾ, ಕೆ. ಸಿ. ವೇಣುಗೋಪಾಲ್ ಸೇರಿ ಹಲವು ನಾಯಕರಿಗೆ ಸೋಂಕು!

ಸಾರಾಂಶ

* ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೋನಾ ಸೋಂಕು  * ಪ್ರಿಯಾಂಕಾ ಗಾಂಧಿ ಕೂಡಾ ಸೋನಿಯಾ ಸಂಪರ್ಕಕ್ಕೆ * ಕೆ. ಸಿ. ವೇಣುಗೋಪಾಲ್ ಸೇರಿ ಹಲವು ನಾಯಕರಿಗೆ ಸೋಂಕು  

ನವದೆಹಲಿ(ಜೂ.02): ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಪ್ರಿಯಾಂಕಾ ಗಾಂಧಿ ಅವರ ಸಂಪರ್ಕಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ, ನಂತರ ಅವರು ಲಕ್ನೋದಿಂದ ದೆಹಲಿಗೆ ಮರಳಿದ್ದಾರೆ. ಸದ್ಯ ಪ್ರಿಯಾಂಕಾ ಗಾಂಧಿಯ ಅವರ ಪರೀಕ್ಷೆ ನಡೆದಿಲ್ಲ. ಸೋನಿಯಾ ಹೊರತಾಗಿ ಪಕ್ಷದ ನಾಯಕ ಕೆ. ಸಿ. ವೇಣುಗೋಪಾಲ್ ಕೂಡ ಕೊರೋನಾ ಸೋಂಕಿತರಾಗಿದ್ದಾರೆ. ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೋನಾ ಲಕ್ಷಣಗಳು ಕಂಡು ಬಂದಿದ್ದು, ಎಲ್ಲರಿಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸೋನಿಯಾದಲ್ಲಿ ಕೊರೋನಾದ ಸೌಮ್ಯ ಲಕ್ಷಣಗಳು

ಕಳೆದ ಕೆಲವು ದಿನಗಳಿಂದ ಸೋನಿಯಾ ಗಾಂಧಿ ಪಕ್ಷದ ಹಲವು ನಾಯಕರು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಅವರಲ್ಲಿ ಕೆಲ ನಾಯಕರಿಗೂ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸೋನಿಯಾ ಗಾಂಧಿಯಲ್ಲಿ ಸೌಮ್ಯ ಜ್ವರದ ಲಕ್ಷಣಗಳು ಕಂಡುಬಂದಿದ್ದು, ಇದಾದ ಬಳಿಕ ಅವರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಯಿತು. ಇದಾದ ನಂತರ ಸೋನಿಯಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ತಿಳಿದುಬಂದಿದೆ. ಪಾಸಿಟಿವ್ ಬಂದ ನಂತರ, ಸೋನಿಯಾ ತನ್ನನ್ನು ತಾನು ಕ್ವಾರಂಟೈನ್ ಮಾಡಿದ್ದು, ಪ್ರತಿಯೊಬ್ಬರೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಕೂಡ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು. ಬಳಿಕ ಅವರು ಮುನ್ನೆಚ್ಚರಿಕೆಯಾಗಿ ಲಕ್ನೋದಿಂದ ದೆಹಲಿಗೆ ಮರಳಿದ್ದಾರೆ.

ಸೋನಿಯಾ ಗಾಂಧಿ ಬಗ್ಗೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, ಸೋನಿಯಾ ಗಾಂಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಸದ್ಯ ಸೋನಿಯಾ ಆರೋಗ್ಯವಾಗಿದ್ದಾರೆ. ಜೂನ್ 8 ರಂದು ಇಡಿ ಮುಂದೆ ಹಾಜರಾಗುವುದಾಗಿ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಅವರು ಹೇಳಿದರು. ನಿನ್ನೆ ದಿನ ಸೋನಿಯಾ ಗಾಂಧಿ ಅವರು ಕೋವಿಡ್ ಪರೀಕ್ಷೆ ನಡೆಸಿದ್ದು, ಅದರಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಮುಂದಿನ 3 ಅಥವಾ 4 ದಿನಗಳ ನಂತರ ಸೋನಿಯಾ ಗಾಂಧಿ ಮತ್ತೊಮ್ಮೆ ಪರೀಕ್ಷೆ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌