Gujarat Assembly elections 43 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!

By Suvarna NewsFirst Published Nov 5, 2022, 10:14 AM IST
Highlights

ಗುಜರಾತ್ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಕಣ ರಂಗೇರಿದೆ. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಆಮ್ ಆದ್ಮಿ ಪಾರ್ಟಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ, ಕಾಂಗ್ರೆಸ್ ಯಾತ್ರೆ ಹಾಗೂ ಒಳರಾಜಕೀಯದಲ್ಲೇ ಮುಳುಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಆದರೆ ಇದೀಗ ಬಿಜೆಪಿಗೂ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಕೆಲ ಸ್ಥಾನಗಳಲ್ಲಿ ಬಿಜೆಪಿಗೆ ತಲೆನೋವು ಹಚ್ಚಿಸಿದೆ.

ಅಹಮ್ಮದಾಬಾದ್(ನ.05): ಕಾಂಗ್ರೆಸ್ ವಿಧಾನಸಬಾ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿದೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಕಾಂಗ್ರೆಸ್ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಘೋಷಣೆಯಾಗಲಿದೆ. 182 ಸ್ಥಾನಗಳ ಗುಜರಾತ್ ವಿಧಾನಸಭಾ ಕ್ಷೇತ್ರ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದಲೂ ಅತೀ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ತವರು, ಕಳೆದರಡು ದಶಕದಿಂದ ಬಿಜೆಪಿ ಭದ್ರಕೋಟೆಯಾಗಿರುವ ಗುಜರಾತ್ ಗೆಲ್ಲಲು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ ಭಾರಿ ಪ್ರಯತ್ನ ನಡೆಸುತ್ತಿದೆ. ಇದೀಗ ಗುಜರಾತ್ ಚುನಾವಣೆಗೆ ಕಾಂಗ್ರೆಸ್ ತನ್ನ 43 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಪ್ರಮುಖ ನಾಯಕರಿಗೆ ಟಿಕೆಟ್ ನೀಡುವ ಮೂಲಕ ಕೆಲ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ತಲೆನೋವು ತಂದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ಸೇರಿದ ಕಾಂಗ್ರೆಸ್ ಚುನಾವಣಾ ಸಮಿತಿ ಅಳೆದು ತೂಗಿ 43 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

ದಕ್ಷಿಣ ಗಾಂಧಿನಗರ, ಪಶ್ಚಿಮ ಸೂರತ್,  ಪೊರಬಂದರ್, ನದಿಯಾದ್, ಜಾಮ್ನಗರ್ ಉತ್ತರ, ರಾಜ್‌ಕೋಟ್ ಗ್ರಾಮೀಣ, ದಕ್ಷಿ ರಾಜ್‌ಕೋಟ್ ಸೇರಿದಂತೆ ಕೆಲ ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.  ಇದೀಗ ಘಟೋಲ್ದಿಯಾ ಕ್ಷೇತ್ರ ಭಾರಿ ಕುತೂಹಲ ಕೆರಳಿಸಿದೆ. ಕಾರಣ ಘಟೋಲ್ದಿಯಾ ಕ್ಷೇತ್ರಕ್ಕೆ ಕಾಂಗ್ರೆಸ್ ರಾಜ್ಯಸಭಾ ಸಂಸದ ಅಮೀಬೆನ್ ಯಾಗ್ನಿಕ್‌ಗೆ ಟಿಕೆಟ್ ನೀಡಿದೆ.. ಇತ್ತ ಇದೇ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಿಎಂ ಬೂಪೇಂದ್ರ ಪಟೇಲ್‌ಗೆ ಮತ್ತೆ ಟಿಕೆಟ್ ನೀಡಲು ಮುಂದಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಅರ್ಜುನ್ ಮೊಧ್ವಾಡಿಯಾ ಮತ್ತೆ ಪೊರಬಂದರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಮಹುವಾ ಕ್ಷೇತ್ರದಿಂದ ಕಾನುಭಾಯಿ ಕಾಲ್ಸಾರಿಯಾ, ಗಾಂಧಿನಗರ ದಕ್ಷಿಣ ಕ್ಷೇತ್ರದಿಂದ ಹಿಮಾಂಶು ಪಟೇಲ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. 

Gujarat Election 2022: ಗುಜರಾತ್‌ನಲ್ಲಿ ಡಿಸೆಂಬರ್‌ 1, 5ಕ್ಕೆ ಎರಡು ಹಂತದ ಮತದಾನ, 8ಕ್ಕೆ ಫಲಿತಾಂಶ!

ಗುಜರಾತ್ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ಈಗಾಗಲೇ 6ನೇ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಇಷ್ಟೇ ಅಲ್ಲ ಚುನಾವಣೆ ಮೂಲಕ ಸಿಎಂ ಸ್ಥಾನಾರ್ಥಿಯನ್ನು ಘೋಷಿಸಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಹವು ಉಚಿತ ಆಫರ್ ಘೋಷಿಸಿದ್ದರೆ. ಸ್ವತಃ ಅರವಿಂದ್ ಕೇಜ್ರಿವಾಲ್ ಒಂದು ಅವಕಾಶ ನೀಡಿ, ಎಲ್ಲವೂ ಉಚಿತ ಎಂದಿದಿದ್ದಾರೆ. 

ಈ ಹಿಂದಿನ ಗುಜರಾತ್ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ನೇರಾ ನೇರ ಸ್ಪರ್ಧೆಯಾಗಿತ್ತು. ಆದರೆ ಈ ಬಾರಿ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದೆ. ಇಷ್ಟೇ ಅಲ್ಲ ಕಾಂಗ್ರೆಸ್ ಸ್ಥಾನ ಆಕ್ರಮಿಸಿಕೊಳ್ಳಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.  

ಗುಜರಾತ್ ಚುನಾವಣೆ ದಿನಾಂಕ ಪ್ರಕಟ, ಉಚಿತ ಆಫರ್ ಘೋಷಿಸಿದ ಕೇಜ್ರಿವಾಲ್!

ಗುಜರಾತ್‌ನಲ್ಲಿ 2 ಹಂತದ ಮತದಾನ
182 ವಿಧಾನಸಭಾ ಸ್ಥಾನಗಳಿರುವ ಗುಜರಾತ್‌ನಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 89 ಸ್ಥಾನಗಳಿಗೆ ಡಿ.1ರಂದು ಹಾಗೂ ಉಳಿದ 93 ಕ್ಷೇತ್ರಗಳಿಗೆ ಡಿ.5ರಂದು ಮತದಾನ ನಡೆಯಲಿದೆ. ಎರಡೂ ಹಂತಕ್ಕೆ ಕ್ರಮವಾಗಿ ನ.5 ಹಾಗೂ ನ.10ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಕ್ರಮವಾಗಿ ನ.14 ಹಾಗೂ 17 ಕಡೆಯ ದಿನಗಳಾಗಿದ್ದು, ನಾಮಪತ್ರಗಳನ್ನು ನ.15 ಹಾಗೂ ನ.18ರಂದು ಪರಿಶೀಲಿಸಲಾಗುತ್ತದೆ. ನಾಮಪತ್ರ ಹಿಂಪಡೆಯಲು ಕ್ರಮವಾಗಿ ನ.17 ಹಾಗೂ 21 ಕಡೆಯ ದಿನಗಳಾಗಿವೆ. ದೇಶದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಗುಜರಾತ್‌ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿಲಾಗಿದೆ.

click me!