
ನವದೆಹಲಿ (ಅ.09) ಚುನಾವಣೆಯಲ್ಲಿ ಅಕ್ರಮ, ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಮತದಾರರ ಹೆಸರು ಡಿಲೀಟ್, ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಹೋರಾಟ ತೀವ್ರಗೊಳಿಸಿದೆ. ಇತ್ತ ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಹೋರಾಟ ನಡೆಸುತ್ತಿದೆ. ಇದರ ನಡುವೆ ಇತ್ತೀಚೆಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಗೆಲುವು ಕಂಡಿದೆ. ಇನ್ನು ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವು ದಾಖಲಿಸಿದರೆ, ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇತ್ತ ತಮಿಳುನಾಡಿನ ಧರ್ಮಪುರದಲ್ಲಿ ವಿಜಯ್ ಜೊಸೆಫ್ ಟಿವಿಕೆ ಗೆಲುವು ಕಂಡಿದೆ. ಉಪ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ.
ಸುವೇಂದು ಅಧಿಕಾರಿ ರಾಜೀನಾಮೆಯಿಂದ ತೆರವಾಗಿದ್ದ ನಂದಿಗ್ರಾಮ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಗೆಲುವು ಕಂಡಿದೆ. ಮಮತಾ ಬ್ಯಾನರ್ಜಿಯ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ನಂದಿಗ್ರಾಮದಲ್ಲಿ ಬಿಜೆಪಿ 1.2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಕಂಡಿದೆ. ನಂದಿಗ್ರಾಮ ಕ್ಷೇತ್ರದಿಂದ ಬಿಜೆಪಿ ಹಸಿ ರಾಣಿ ರಾಥ್ ಅವರಿಗೆ ಟಿಕೆಟ್ ನೀಡಿತ್ತು. ಸುವೇಂಧು ಅದಿಕಾರಿ ಆಪ್ತ ಭದ್ರತಾ ಅಧಿಕಾರಿ ಚಂದ್ರನಾಥ್ ರಾಥ್ ಬಂಗಾಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ದುರ್ಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದರು. ಚಂದ್ರನಾಥ್ ರಾಥ್ ತಾಯಿ ಹಸಿ ರಾಣಿ ರಾಥ್ ಇದೀಗ ನಂದಿಗ್ರಾದಲ್ಲಿ 1.64 ಲಕ್ಷ ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ 41 ಸಾವಿರ ಮತ ಪಡೆದಿದ್ದಾರೆ.
ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ರೆಜಿನಗ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಂಡಿದೆ. ಬಿಜೆಪಿ ಅಭ್ಯರ್ಥಿ ಶಂಕರ್ವ ಸರ್ಕಾರ ಬರೋಬ್ಬರಿ 75 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಶೇಕಡಾ 70ರಷ್ಟು ಅಲ್ಪಸಂಖ್ಯಾತ ಸಮುದಾಯವಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಇತಿಹಾಸ ರಚಿಸಿದೆ.
ಅಸ್ಸಾಂನ ನಾಗೌನ್ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದೇವಶಿಶ್ ಶರ್ಮಾ ಭರ್ಜರಿ ಗೆಲುವು ಕಂಡಿದ್ದಾರೆ. AIUD ಮುಖ್ಯಸ್ಥ ಮೊಹಮ್ಮದ್ ಬದ್ರುದ್ದೀನ್ 2ನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಶಿಬಾಮೊನಿ ಬೋರಾ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ತಮಿಳುನಾಡಿನಲ್ಲಿ ಟಿವಿಕೆ ಧರ್ಮಪುರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಕಂಡಿದೆ. ಎರಡು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ನಟ ವಿಜಯ್ ಜೊಸೆಫ್, ಕೊನೆಗೆ ಧರ್ಮಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದುರು. ಇದೀಗ ಧರ್ಮಪುರ ಮಾತ್ರವಲ್ಲ ಮಧುರಂತಕಂ ಕ್ಷೇತ್ರದಲ್ಲೂ ಟಿವಿಕೆ ಗೆಲುವು ಕಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ