Breaking: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಹೋಗೋದಿಲ್ಲ, ಕಾಂಗ್ರೆಸ್‌ ಅಧಿಕೃತ ಘೋಷಣೆ!

By Santosh Naik  |  First Published Jan 10, 2024, 4:26 PM IST

ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಂಗ್ರೆಸ್‌ ಭಾಗಿಯಾಗೋದಿಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಇದನ್ನು ತನ್ನದೇ ಕಾರ್ಯಕ್ರಮ ಎಂದು ಬಿಂಬಿಸಿದೆ ಎಂದು ಕಾಂಗ್ರೆಸ್‌ ಹೇಳಿದೆ.
 


ನವದೆಹಲಿ (ಜ.10): ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೂ ಕೂಡ ಭಾಗಿಯಾಗೋದಿಲ್ಲ ಎಂದು ತಿಳಿಸಿದೆ. ಈ ಕುರಿತಾಗಿ ಬುಧವಾರ ಅಧಿಕೃತವಾಗಿ ತಿಳಿಸಿದೆ. ಇದನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ತನ್ನ ಕಾರ್ಯಕ್ರಮ ಎಂದು ಬಿಂಬಿಸಿದೆ. ಆದರೆ, ಧರ್ಮ ಎನ್ನುವುದು ವೈಯಕ್ತಿಕ ಎಂದು ಕಾಂಗ್ರೆಸ್‌ ತನ್ನ ನಿಲುವು ತಿಳಿಸಿದೆ.ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಅಧೀರ್‌ ರಂಜನ್‌ ಚೌಧರಿ ಅವರು ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ ಎಂದು ಕಾಂಗ್ರೆಸ್‌ ಬುಧವಾರ ಅಧಿಕೃತವಾಗಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ ಪಕ್ಷ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ವ್ಯತಿರಿಕ್ತ ಹೇಳಿಕೆಗಳು ಬಂದ ಕಾರಣಕ್ಕೆ, ರಾಮಮಂದಿರ ಉದ್ಘಾಟನೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಪಾಲ್ಗೊಳ್ಳುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಅನುಮಾನಗಳಿದ್ದವು. ಆದರೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಸಂಪೂರ್ಣವಾಗಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕಾರ್ಯಕ್ರಮವಾಗಿ ಕಾಣುತ್ತಿರುವುದರಿಂದ ಇದರಲ್ಲಿ ಭಾಗಿಯಾಗೋದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

“ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಆದರೆ, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಸ್ಪಷ್ಟವಾಗಿ ಮುಂದಿಡಲಾಗಿದೆ. 2019 ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್/ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Tap to resize

Latest Videos

ಕಳೆದ ತಿಂಗಳು, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ  ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಮಮಂದಿರ ಆಹ್ವಾನವನ್ನು ಸ್ವೀಕರಿಸಿದ್ದರು. 2024ರ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

 

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಯಾಕೆ ಹೋಗ್ತಿಲ್ಲ: ಇಲ್ಲಿದೆ ಮೂರು ಕಾರಣ

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಅಯೋಧ್ಯೆ ರಾಮ ಮಂದಿರದ ಸ್ವರ್ಣ ದ್ವಾರ!

* ಆರೆಸ್ಸೆಸ್/ಬಿಜೆಪಿ ರಾಮಮಂದಿರವನ್ನು ರಾಜಕೀಯ ಯೋಜನೆ ಇರಿಸಿ ಮಾಡಿದೆ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

* ದೇವಾಲಯವು ಪೂರ್ಣವಾಗಿಲ್ಲ. ಅಪೂರ್ಣ ಮಂದಿರದ ಉದ್ಘಾಟನೆಗೆ ಹೋಗೋದಿಲ್ಲ.

* ಚುನಾವಣಾ ಲಾಭಕ್ಕಾಗಿ ರಾಮ ಮಂದಿರ ಉದ್ಘಾಟನೆಯನ್ನು ಮುಂದಿಡಲಾಗಿದೆ. ಪಕ್ಷ ಮತ್ತು ಪಕ್ಷದ ನಾಯಕರು 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುತ್ತಾರೆ ಎಂದು ತಿಳಿಸಿದೆ.

Here is the statement of Shri , General Secretary (Communications), Indian National Congress. pic.twitter.com/JcKIEk3afy

— Congress (@INCIndia)

 

 

click me!