ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಕೃಷಿ ಕಾಯ್ದೆ ರದ್ದು: ಪ್ರಿಯಾಂಕಾ!

Published : Feb 11, 2021, 08:06 AM ISTUpdated : Feb 11, 2021, 08:45 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಕೃಷಿ ಕಾಯ್ದೆ ರದ್ದು: ಪ್ರಿಯಾಂಕಾ!

ಸಾರಾಂಶ

 ರೈತಾಪಿ ವರ್ಗಕ್ಕೆ ಸಂಕಷ್ಟಕ್ಕೆ ಸಿಲುಕಿಸಲಿರುವ ಕೇಂದ್ರದ 3 ಕೃಷಿ ಕಾಯ್ದೆ ರದ್ದು| ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಕೃಷಿ ಕಾಯ್ದೆ ರದ್ದು: ಪ್ರಿಯಾಂಕಾ

ಲಖನೌ(ಫೆ.11): ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇ ಆದಲ್ಲಿ ರೈತಾಪಿ ವರ್ಗಕ್ಕೆ ಸಂಕಷ್ಟಕ್ಕೆ ಸಿಲುಕಿಸಲಿರುವ ಕೇಂದ್ರದ 3 ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಘೋಷಿಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಪಕ್ಷ ಆಯೋಜಿಸಿದ್ದ ರೈತ ಮಹಾಪಂಚಾಯತ್‌ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಬಿಜೆಪಿ ನಾಯಕರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಅವಮಾನಿಸುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ರಾಕ್ಷಸಿ ಸ್ವರೂಪಿಯಾದ ಈ ಕಾಯ್ದೆಗಳನ್ನು ಮುಂದುವರಿಸಲ್ಲ’ ಎಂದರು.

ಅಲ್ಲದೆ, ‘ಕಾಯ್ದೆಗಳಿಂದಾಗಿ ಎಪಿಎಂಸಿ ವ್ಯವಸ್ಥೆ ಕ್ರಮೇಣ ಪತನಗೊಳ್ಳಲಿದೆ. ಕಾಯ್ದೆಗಳು ರದ್ದಾಗುವತನಕ ಹೋರಾಟ ಮುಂದುವರಿಸಲಿದ್ದೇವೆ’ ಎಂದು ಘೋಷಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು