
ರಾಯ್‌ಬರೇಲಿ(ಜ.19): ಒಂದಲ್ಲ, ಎರಡಲ್ಲ, ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಅದು ಕೂಡ ಸೋನಿಯಾ ಗಾಂಧಿಯ ರಾಯ್‌ಬರೇಲಿ ಕ್ಷೇತ್ರ ನಾಯಕರು, ಕಾರ್ಯಕರ್ತರು ಸೇರಿ 1,000 ಮಂದಿ ಇದೀಗ ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಇದು ಕಾಂಗ್ರೆಸ್ ತಲೆನೋವು ಹೆಚ್ಚಿಸಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ಯಾಕೆ? ಸೀಕ್ರೆಟ್ ಬಿಚ್ಚಿಟ್ಟ ಸಚಿವ...!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವಕ್ಷೇತ್ರ ರಾಯ್ ಬರೇಲಿಯ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಮರ್ಥ ನಾಯಕತ್ವದ ಕೊರತೆ. ಯುವಕರು ಹಾಗೂ ಸಮರ್ಥರಿಗೆ ಅವಕಾಶದ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ರಾಯ್‌ಬರೇಲಿ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾರ್ಯಕರ್ತರ ಕೂಗು ಕೇಳದ ಕಾಂಗ್ರೆಸ್ ಜೊತೆ ಪಕ್ಷ ಸಂಘಟನೆ ಮಾಡಲು ಕೆಲಸ ಮಾಡಲು ಸಾಧ್ಯವಲ್ಲ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿರುವ ಕಾರ್ಯಕರ್ತರು ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ