
ನವದೆಹಲಿ(ಆ.28): ಕೊನೆಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಖಚಿತವಾಗಿದೆ. ಇಂದು ಸಭೆ ಸೇರಿದ ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷದ ಆತಂಕ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ಸಭೆ ನಡೆಸಿದ ಅಕ್ಟೋಬರ್ 17ಕ್ಕೆ ಚುನಾವಣೆ ನಡೆಸಲು ನಿರ್ಧರಿಸಿದೆ. ಇನ್ನು ಫಲಿತಾಂಶ ಅಕ್ಟೋಬರ್ 19ಕ್ಕೆ ಘೋಷಣೆಯಾಗಲಿದೆ. ಅಕ್ಟೋಬರ್ 19 ರಂದು ಕಾಂಗ್ರೆಸ್ ಪಕ್ಷ ನೂತನ ಅಧ್ಯಕ್ಷರನ್ನು ಕಾಣಲಿದೆ. ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಬಿಜೆಪಿ ಸೇರಿದಂತೆ ಹಲವು ಪಕ್ಷಗಳ ಟೀಕೆಗೆ ಉತ್ತರ ನೀಡಲು ಹಾಗೂ ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲು ಕಾಂಗ್ರೆಸ್ ಮುಂದಾಗಿದೆ.
ಸೆಪ್ಟೆಂಬರ್ 22 ರಂದು ಆಲ್ ಇಂಡಿಯಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಚುನಾವಣೆ ಕುರಿತು ನೋಟಿಫಿಕೇಶನ್ ಹೊರಡಿಸಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 24 ರಿಂದ 30 ರೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಅಕ್ಟೋಬರ್ 8 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.
ದೆಹಲಿ ಉಪ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಅಥವಾ ಕಿತ್ತೆಸೆಯಿರಿ, ಆಪ್ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ
ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಬೆಳಗ್ಗೆ 100 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಇನ್ನು ಅಕ್ಟೋಬರ್ 19 ರಂದು ಬೆಳಕ್ಕೆ 10 ಗಂಟೆಗೆ ಮತ ಏಣಿಕೆ ನಡೆಸಿ ಫಲಿತಾಂಶ ಘೋಷಣೆಯಾಗಲಿದೆ. ಸೆಪ್ಟೆಂಬರ್ 4 ರಂದು ಕಾಂಗ್ರೆಸ್ ಆಯೋಜಿಸುತ್ತಿರುವ ಭಾರತತ್ ಜುಡೋ ಯಾತ್ರೆ ಆರಂಭಗೊಳ್ಳುತ್ತಿದೆ.
2019ರ ಲೋಕಸಭಾ ಚುನಾವಣೆ ಸೋಲು ಹಾಗೂ ಅದರ ಹಿಂದಿನ ವಿಧಾನಸಭಾ ಚುನಾವಣೆ ಸೋಲಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. 2019ರಿಂದ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 2 ವರ್ಷದಿಂದ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿದ್ದರೆ. ಇನ್ನು ಇತ್ತೀಚೆಗಿನ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್‌ಗೆ ಜವಾಬ್ದಾರಿ ನೀಡಲು ಮುಂದಾಗಿತ್ತು. ಆದರೆ ಅಶೋಕ್ ಗೆಹ್ಲೋಟ್ ನಯವಾಗಿ ಈ ಆಫರ್ ತಿರಸ್ಕರಿಸಿದ್ದರು.
ಕಾಂಗ್ರೆಸ್ ಅಧ್ಯಕ್ಷರಾಗಿ ಮರಳಲು ರಾಹುಲ್ ಗಾಂಧಿಯನ್ನೇ ಒತ್ತಾಯಿಸುತ್ತೇವೆ: ಖರ್ಗೆ
ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಗೆ ರಾಹುಲ್ ಗಾಂಧಿ ಸ್ಪರ್ಧಿಸಬೇಕು ಅನ್ನೋ ಮಾತುಗಳು ಕೇಳಿಬರುತ್ತಿದೆ. ರಾಹುಲ್ ಗಾಂಧಿಯ ಪಕ್ಷವನ್ನು ಮುನ್ನಡೆಸಲು ಸಮರ್ಥರು ಎಂದು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ