
ನವದೆಹಲಿ(ಅ.16): ಕಾಂಗ್ರೆಸ್(Congress) ಪಕ್ಷಕ್ಕೆ ಅಧ್ಯಕ್ಷ ಯಾರು ಅನ್ನೋದು ಹಲವು ವರ್ಷಗಳಿಂದ ನಡೆಯುತ್ತಿರುವ ಚರ್ಚೆ. ಇದೇ ಕಾರಣಕ್ಕಾಗಿ ಹಿರಿಯ ನಾಯಕರು ಪಕ್ಷದ ವಿರುದ್ಧವೇ ತಿರುಗಿ ಬಿದ್ದ ಘಟನೆಗಳು ನಡೆದಿದೆ. ಇಂದು ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ(Congress Working Committee) ಮತ್ತೆ ಸೋನಿಯಾ ಗಾಂಧಿಗೆ(Sonia Gandhi) ಫುಲ್ ಟೈಮ್ ಕಾಂಗ್ರೆಸ್ ಅಧ್ಯಕ್ಷೆ(president) ಪಟ್ಟ ಕಟ್ಟಲಾಗಿದೆ.
ಡಿಕೆಶಿ ಮೇಲಿನ ಕಮಿಷನ್ ಮಾತು... ಪ್ರತಿಕ್ರಿಯೆ ಕೊಡದೆ ಜಾರಿಕೊಳ್ಳುತ್ತಿರುವ ಸಿದ್ದು!
2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ನಾಯಕನಿಲ್ಲದೆ ಪರದಾಡಿತು. ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದವರಿದರೂ ಪೂರ್ಣ ಪ್ರಮಾಣದ ಅಧ್ಯಕ್ಷ ಸ್ಥಾನಕ್ಕಾಗಿ ಹಿರಿಯ ನಾಯಕರು G23 ಒಕ್ಕೂಟ ರಚಿಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೇ ತಿರುಗಿ ಬಿದ್ದಿದ್ದರು. ಹೀಗಾಗಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿತ್ತು. ಇಂದು ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷ ನೇಮಕವಾಗಲಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬಂದಿತ್ತು. ಆದರೆ ಸಭೆ ಆರಂಭದಲ್ಲೇ ಕಾಂಗ್ರೆಸ್‌ಗೆ ನಾನು ಪೂರ್ಣಾವಧಿ ಅಧ್ಯಕ್ಷೆ ಎಂದು ಸ್ವತಃ ಸೋನಿಯಾ ಗಾಂಧಿ ಘೋಷಿಸುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ರಾಜೀನಾಮೆ ಹಿಂಪಡೆವ ಸುಳಿವು ನೀಡಿದ ಸಿಧು : ಮತ್ತೆ ವಾಪಸ್
ಹಿರಿಯರ ಅಸಮಾಧಾನ, ಚುನಾವಣೆಗಳಲ್ಲಿನ ಸೋಲು ಸೇರಿದಂತೆ ಹಲವು ಕಾರಣಗಳಿಂದ ಸೊರಗಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಚೈತನ್ಯ ತುಂಬಲು ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. ಜಿ23 ನಾಯಕರು ಮಾಧ್ಯಮದ ಮೂಲಕ ನನ್ನ ಜೊತೆ ಮಾತನಾಡುವ ಅಗತ್ಯವಿಲ್ಲ. ನಾವೆಲ್ಲ ಜೊತೆಯಾಗಿ ಕೂತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಬೇಕು. ಬೆಲೆ ಏರಿಕೆ ಸೇರಿದಂತೆ ಹಲವು ಜನ ವಿರೋಧಿ ನಿಲುವಗಳನ್ನು ಕಾಂಗ್ರೆಸ್ ಒಗ್ಗಟ್ಟಾಗಿ ನಿಂತು ಹೋರಾಡಬೇಕಿದೆ. ಇದಕ್ಕಾಗಿ ಕಾಂಗ್ರೆಸ್ ಹೊಸ ಉತ್ಸಾಹದೊಂದಿಗೆ ಕೆಲಸ ಮಾಡಬೇಕು ಎಂದು ಸೋನಿಯಾ ಗಾಂಧಿ ನಾಯಕರಿಗೆ ಕರೆ ನೀಡಿದ್ದಾರೆ.
ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ
ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಹಲವು ನಾಯಕರು ಮತ್ತೆ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದ್ದರು. ಅವಿರೋಧವಾಗಿ ರಾಹುಲ್ ಆಯ್ಕೆಗೆ ಸಮ್ಮತಿ ಸೋಚಿಸಿದ್ದರು. ಆದರೆ ರಾಹುಲ್ ಗಾಂಧಿ ಈ ಕುರಿತು ಚಿಂತಿಸುವುದಾಗಿ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಾರಥ್ಯ ವಹಿಸಿಕೊಳ್ಳುವ ಕುರಿತು ಚಿಂತಿಸಲಾಗುವುದು ಎಂದಿದ್ದಾರೆ.
ಸೋನಿಯಾ ಗಾಂಧಿ 2022ರ ಸೆಪ್ಟೆಂಬರ್ ವರೆಗೆ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮುಂದುವರಿಯಲಿದ್ದಾರೆ. ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ. ಈ ವೇಳೆ ಮಹತ್ತರ ಜವಾಬ್ದಾರಿ ವಹಿಸಿಕೊಳ್ಳುವ ಕುರಿತು ಆಲೋಚಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ