ಅಹಮದಾಬಾದ್‌ನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Published : Oct 09, 2022, 07:37 AM IST
ಅಹಮದಾಬಾದ್‌ನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಸಾರಾಂಶ

ಗುಜರಾತ್‌ನ ಕರ್ನಾಟಕ ಸಂಘ ಅಮೃತ ಮಹೋತ್ಸವ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಭೂಮಿ ಒದಗಿಸಲು ಗುಜರಾತ್‌ ಸರ್ಕಾರ ಸಮ್ಮತಿಸಿದೆ. 

ಅಹಮದಾಬಾದ್‌ (ಅ.09): ಗುಜರಾತ್‌ನ ಕರ್ನಾಟಕ ಸಂಘ ಅಮೃತ ಮಹೋತ್ಸವ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಭೂಮಿ ಒದಗಿಸಲು ಗುಜರಾತ್‌ ಸರ್ಕಾರ ಸಮ್ಮತಿಸಿದೆ. ಶನಿವಾರ ಅಹ್ಮದಾಬಾದ್‌ನ ಗುಜರಾತ್‌ ವಿವಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ 2022 ವಿಶೇಷ ಕಾರ್ಯಕ್ರಮದ ವೇಳೆ ಕನ್ನಡ ಭವನ ನಿರ್ಮಾಣ ಕುರಿತಂತೆ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಪ್ರಸ್ತಾಪಿಸಿ ಭೂಮಿ ಒದಗಿಸುವಂತೆ ಸಭೆಯಲ್ಲಿದ್ದ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್‌ ಅವರನ್ನು ಮನವಿ ಮಾಡಿದರು. 

ಇದಕ್ಕೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಗುಜರಾತ್‌ನಲ್ಲಿರುವ ಕನ್ನಡಿಗರು ಈ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ. ಇಂತಹ ಕನ್ನಡಿಗರ ಸಂಘ ಅಮೃತ ಮಹೋತ್ಸವ ಪೂರೈಸುತ್ತಿರುವ ಸಂದರ್ಭದಲ್ಲಿ ಅಹ್ಮದಾಬಾದ್‌ನಲ್ಲಿ ಕನ್ನಡ ಸಂಘ ಸ್ಥಾಪಿಸುವ ಉದ್ದೇಶ ಹೊಂದಿದೆ. ಅದಕ್ಕೆ ರಾಜ್ಯ ಸರಕಾರ ಭೂಮಿ ಒದಗಿಸಿದರೆ ಸಿಎಸ್‌ಆರ್‌ ಮೂಲಕ ಅನುದಾನ ಒದಗಿಸಲು ತಾವು ಸಿದ್ಧ ಎಂದು ಪ್ರಹ್ಲಾದ್‌ ಜೋಶಿ ಹೇಳಿದರು. ಇದಕ್ಕೆ ಮುಖ್ಯಮಂತ್ರಿ ಸಮ್ಮತಿಸಿದರು. ಈ ವೇಳೆ ಕರ್ನಾಟಕ ಸರಕಾರದ ಪರವಾಗಿ ಪ್ರತಿಕ್ರಿಯಿಸಿದ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಅಹ್ಮದಾಬಾದ್‌ ನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದಲೂ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ರಾಹುಲ್ ಗಾಂಧಿಯನ್ನು ಯಾರು ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನೆರವು: ಇದಕ್ಕೂ ಮುನ್ನ ಮಾತನಾಡಿದ ಗುಜರಾತ್‌ನ ಗೃಹ, ಯುವಜನ ಸೇವೆ ಮತ್ತು ಸಂಸ್ಕೃತಿ ಸಚಿವ ಹಷ್‌ರ್‍ ಸಂಘ್ವಿ, ಗುಜರಾತಿನ ಕನ್ನಡ ಸಂಘಗಳು ಗುಜರಾತಿನ ಸಂಸ್ಕೃತಿಯನ್ನೂ ಸೇರಿಸಿಕೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಹಮ್ಮಿಕೊಂಡರೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ತಮಗೆ ಸೂಚನೆ ನೀಡಿದ್ದಾರೆ ಎಂದರು.

ಕರ್ನಾಟಕದ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮಾತನಾಡಿ, ಗುಜರಾತ್‌ ಅಭಿವೃದ್ಧಿಯಲ್ಲಿ ಕನ್ನಡಿಗರು ಮತ್ತು ಕರ್ನಾಟಕದ ಅಭಿವೃದ್ಧಿಯಲ್ಲಿ ಗುಜರಾತಿಗರು ಸಾಕಷ್ಟುಕೊಡುಗೆ ನೀಡುತ್ತಿದ್ದಾರೆ. ಇದರ ಜತೆಗೆ ಕೈಗಾರಿಕಾ ಅಭಿವೃದ್ಧಿಯಲ್ಲಿ ಎರಡೂ ರಾಜ್ಯಗಳು ಮೊದಲೆರಡು ಸ್ಥಾನಗಳಲ್ಲಿವೆ ಎಂದರು. ನವೆಂಬರ್‌ 2ರಿಂದ ಕರ್ನಾಟಕದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಇದಕ್ಕೆ ಗುಜರಾತ್‌ ಕನ್ನಡಿಗರು ಸ್ಥಳೀಯರೊಂದಿಗೆ ಸೇರಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಭಾರತ ಹಿರಿಯಣ್ಣನ ಸ್ಥಾನ ಗಳಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಹಸ್ಮುಖ ಪಟೇಲ್‌, ಉಮೇಶ್‌ ಜಾಧವ್‌, ರಾಜ್ಯಸಭೆ ಸದಸ್ಯ ಜಗ್ಗೇಶ್‌, ಅಹ್ಮದಾಬಾದ್‌ ಮೇಯರ್‌ ಕಿರೀಟ್‌ ಕುಮಾರ್‌ ಪಮಾರರ್‌, ಶಾಸಕರಾದ ಪಿ.ರಾಜೀವ್‌, ದೊಡ್ಡನಗೌಡ ಪಾಟೀಲ್‌, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಕೆಎಸ್‌ ಎಸ್‌ ಡಿಸಿ ಅಧ್ಯಕ್ಷ ನರೇಶ್‌ ಕುಮಾರ್‌, ಅಹ್ಮದಾಬಾದ್‌ ಕರ್ನಾಟಕ ಸಂಘದ ಅಧ್ಯಕ್ಷ ಹನುಮಂತ ಬೆನ್ನೂರು ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್