
ಭೋಪಾಲ್: ಆರ್‌ಎಸ್‌ಎಸ್‌ನ ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ವಿರುದ್ಧ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಇಂದೋರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದಲಿತರು ಮತ್ತು ಮುಸ್ಲಿಮರಿಗೆ ಸಮಾನ ಹಕ್ಕು ನೀಡುವುದಕ್ಕಿಂತ ಬ್ರಿಟಿಷರ ಆಳ್ವಿಕೆಯಲ್ಲೇ ಬದುಕಲು ನಾನು ಬಯಸುತ್ತೇನೆ ಎಂದು ಗೋಲ್ವಾಲ್ಕರ್ ನೀಡಿದ್ದಾರೆ ಎನ್ನಲಾದ ವಿವಾದಿತ ಅಂಶವನ್ನು ದಿಗ್ವಿಜಯ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಕುರಿತು ಕಿಡಿಕಾರಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ ನಾಯಕರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಗೋಲ್ವಾಲ್ಕರ್ ವಿರುದ್ಧ ಸುಳ್ಳು ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಾಮಾಜಿಕ ದ್ವೇಷ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ.
ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಸಜ್ಜಾಗಿದೆ,
Rahul Gandhi Disqualified: ಜರ್ಮನಿಗೆ ಥ್ಯಾಂಕ್ಸ್ ಹೇಳಿದ ದಿಗ್ವಿಜಯ್, ಕಪಿಲ್ ಸಿಬಲ್ ಕೆಂಡ!
ದಿಗ್ವಿಜಯ್ ಸಿಂಗ್ ಹೇಳಿಕೆ ಒಪ್ಪಲ್ಲ ಎಂದ ರಾಹುಲ್ ಗಾಂಧಿ, ಸೇನೆಯ ಕಾರ್ಯಾಚರಣೆಗಳಿಗೆ ಸಾಕ್ಷಿ ಬೇಕಿಲ್ಲ ಎಂದ ರಾಗಾ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ