
ಅಹಮದಾಬಾದ್: ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ತಮಗೆ ವಿಧಿಸಲಾದ 2 ವರ್ಷ ಜೈಲು ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಸೂರತ್ ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಒಂದು ವೇಳೆ ತಡೆ ಸಿಕ್ಕರೆ, ರಾಹುಲ್ ಸಂಸದ ಸ್ಥಾನ ಮರಳಿ ಸಿಗಲಿದ್ದು, 2024ರ ಚುನಾವಣೆಯಲ್ಲಿ ಕಣಕ್ಕಿಳಿಯುವ ಅವಕಾಶ ದೊರೆಯಲಿದೆ.
ಕಳೆದ ಗುರುವಾರ ರಾಹುಲ್ (Rahul Gandhi) ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್.ಪಿ.ಮೊಗೇರಾ ಅವರು, ವಾದ ಪ್ರತಿವಾದಗಳನ್ನು ಆಲಿಸಿ ಏ.20ರಂದು ಪ್ರಕಟಿಸುವುದಾಗಿ ತೀರ್ಪನ್ನು ಕಾಯ್ದಿರಿಸಿದ್ದರು. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡುವ ಸಮಯದಲ್ಲಿ ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರೇ ಏಕಾಗಿರುತ್ತಾರೆ ಎಂದು ಪ್ರಶ್ನಿಸಿದ್ದರು. ಇದರ ವಿರುದ್ಧ ಗುಜರಾತ್ ಶಾಸಕ (Gujarat MLA) ಪೂರ್ಣೇಶ್ ಮೋದಿ (Poornesh Modi) ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್‌ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಾದ ಬಳಿಕ ರಾಹುಲ್‌ರ ವಯನಾಡು ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. ಜೊತೆಗೆ ದೆಹಲಿಯಲ್ಲಿ ನೀಡಲಾದ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ರಾಹುಲ್ ತಮ್ಮ ಮನೆ ತೆರವುಗೊಳಿಸಿದ್ದರು.
ಮೋದಿ ಸರ್‌ನೇಮ್ ಕೇಸ್, ಪಾಟ್ನಾ ಕೋರ್ಟ್‌ನಿಂದ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ!
ರಾಹುಲ್ ಗಾಂಧಿಗೆ ಮತ್ತೊಂದು ಶಾಕ್, ಅದಾನಿ ಟ್ವೀಟ್‌ಗೆ ಕ್ರಿಮಿನಲ್ ಡಿಫಮೇಶನ್ ಎಚ್ಚರಿಕೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ