
ನವದೆಹಲಿ(ಮಾ.23): ಹೆಚ್ಚಾಗುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇದೀಗ ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ನಿರ್ಧರಿಸಿದೆ. ಈ ಮೂಲಕ ಹಂತ ಹಂತವಾಗಿ ದೇಶದಲ್ಲಿ ಲಸಿಕೆ ಅಬಿಯಾನವನ್ನು ಕೇಂದ್ರ ವಿಸ್ತರಿಸುತ್ತಿದೆ.
"
ಕೊರೋನಾ ಲಸಿಕೆಯಿಂದ ಎಷ್ಟು ಸಮಯ ರಕ್ಷಣೆ? ಏಮ್ಸ್ ವೈದ್ಯರು ಕೊಟ್ಟ ಉತ್ತರವಿದು!.
ಕೇಂದ್ರ ಸರ್ಕಾರ ಎಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ನಿರ್ಧರಿಸಿದೆ. ಅರ್ಹರು ತಕ್ಷವೇ ರಿಜಿಸ್ಟ್ರೇಶನ್ ಮಾಡಿಸಿ ಲಸಿಕೆ ಪಡೆಯಬೇಕು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಹೇಳಿದ್ದಾರೆ.
45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಇದೇ ವೇಳೆ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ರಿಜಿಸ್ಟ್ರೇಶನ್ ಮಾಡಲು ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಮಾರ್ಚ್ 1 ರಿಂದ ಕೇಂದ್ರ ಸರ್ಕಾರ 60 ವರ್ಷ ಮೇಲ್ಪಟ್ಟ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುತ್ತಿದೆ. ಜನವರಿ 16 ರಿಂದ ಭಾರತದಲ್ಲಿ ಲಸಿಕೆ ನೀಡುವಿಕೆ ಅಭಿಯಾನ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಕೊರೋನಾ ವಾರಿಯರ್ಸ್‌ಗೆ ಲಸಿಕೆ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ