
ನವದೆಹಲಿ(ಮೇ.02): ವಿಮಾನ ಪ್ರಯಾಣಿಕರಿಗೆ ಪ್ರಯಾಣದ ಅವಧಿ ಉಳಿತಾಯ ಮಾಡಲು ಹಾಗೂ ವಿಮಾನಯಾನ ಕಂಪನಿಗಳ ವೆಚ್ಚ ತಗ್ಗಿಸಲು ದೇಶದ ವಾಯುಸೀಮೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಿಲಿಟರಿ ವ್ಯವಹಾರಗಳ ಇಲಾಖೆಯ ನಿಕಟ ಸಹಕಾರದೊಂದಿಗೆ ಇದನ್ನು ನಡೆಸಲಾಗುತ್ತದೆ. ದೇಶದ ನಾಗರಿಕ ವಿಮಾನಯಾನ ಕ್ಷೇತ್ರವನ್ನು ಮತ್ತಷ್ಟುಪರಿಣಾಮಕಾರಿ ಮಾಡಲು ಸಹಾಯಕವಾಗುವ ಕಾರ್ಯತಂತ್ರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಮಗ್ರವಾಗಿ ಚರ್ಚಿಸಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಹೆಚ್ಚು ಆದಾಯ ಗಳಿಸಿ, ವಿಮಾನ ನಿಲ್ದಾಣಗಳಲ್ಲಿ ಹೆಚ್ಚು ಕ್ಷಮತೆ ತರುವ ಉದ್ದೇಶದಿಂದಾಗಿ ಆರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವಕ್ಕೆ ಹಸ್ತಾಂತರಿಸಲು ಸೂಚಿಸಲಾಗಿದೆ. ಇದಕ್ಕಾಗಿ ಮೂರು ತಿಂಗಳಲ್ಲಿ ಟೆಂಡರ್ ಆರಂಭಿಸುವ ಸೂಚನೆ ನೀಡಲಾಗಿದೆ. ಶುಕ್ರವಾರ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತಿತರರು ಇದ್ದರು.
ವಿದ್ಯುತ್ ಪೂರೈಕೆ:
ಇದೇ ವೇಳೆ, ವಿದ್ಯುತ್ ವಲಯದ ಅಧಿಕಾರಿಗಳ ಜತೆ ಪ್ರಧಾನಿ ಸಭೆ ನಡೆಸಿದರು. ಎಲ್ಲ ಬಳಕೆದಾರರಿಗೂ ದಿನದ ಇಪ್ಪತ್ನಾಲ್ಕೂ ವಿದ್ಯುತ್ ತಾಸು ತಡೆ ರಹಿತ ಪೂರೈಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸಲಹೆ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ