
ದೆಹಲಿ(ಏ.09) ದೇಶದಲ್ಲಿ ಕೊರೋನಾ ವೈರಸ್ 2ನೇ ಆರ್ಭಟ ಆರಂಭಿಸಿದೆ. ಕಳೆದ ಬಾರಿಗಿಂತ ಈ ಬಾರಿ ಕೊರೋನಾ ಹರಡುವಿಕೆ ಪ್ರಮಾಣ ಹೆಚ್ಚಾಗಿದೆ. ಈಗಾಗಲೇ ದೇಶದಲ್ಲಿ ಪ್ರತಿ ದಿನ 1.5 ಲಕ್ಷ ಪ್ರಕರಣಗಳು ದಾಖಲಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹೆಯಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜು ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ವಿದೇಶಕ್ಕೆ ಯಾಕೆ? ದೇಶದ ಎಲ್ಲರಿಗೂ ಲಸಿಕೆ ನೀಡಿ: ಪ್ರಧಾನಿ ಮೋದಿಗೆ ರಾಹುಲ್ ಪತ್ರ!.
ನಿನ್ನೆ(ಏ.09) ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಕೊರೋನಾ ಸಭೆಯಲ್ಲಿ ಪಾಲ್ಗೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಠಿಣ ಕ್ರಮದ ಭರವಸೆ ನೀಡಿದ್ದರು. ಇದೇ ವೇಳೆ 2ನೇ ಅಲೆ ಹರಡುವಿಕೆ ತಡೆಯಲು ಲಾಕ್‌ಡೌನ್ ಹೊರತು ಪಡಿಸಿ ಉಳಿದ ಕ್ರಮಗಳ ಕುರಿತು ಚಿಂತನೆ ನಡೆಸಬೇಕು. ಕೊರೋನಾ ಮಾರ್ಗಸೂಚಿ ಪಾಲನೆಗೆ ಆದ್ಯತೆ ನೀಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ಸಲಹೆ ಬಳಿಕ ಇಂದು ಸಭೆ ನಡಸಿದ ಕೇಜ್ರಿವಾಲ್ ಇದೀಗ ಶಾಲಾ-ಕಾಲೇಜ್ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೋನಾ ನಿಯಮ ಉಲ್ಲಂಘಿಸಿದ ಪ್ರಧಾನಿ; ದುಬಾರಿ ದಂಡ ಹಾಕಿದ ನಾರ್ವೆ ಪೊಲೀಸ್!.
ದೆಹಲಿ ಸರ್ಕಾರದ ಆದೇಶ ಎಲ್ಲಾ ತರಗತಿಗಳು ಅನ್ವಯವಾಗಲಿದೆ. ವಿದ್ಯಾರ್ಥಿಗಳ ಓಡಾಟ, ಅವರ ಹಿಂದೆ ಪೋಷಕರ ಅಲೆದಾಟ ತಪ್ಪಿಸಿ ಕೊರೋನಾ 2ನೇ ಅಲೆಗೆ ಬ್ರೇಕ್ ನೀಡಲು ಅರವಿಂದ್ ಕೇಜ್ರಿವಾಲ್ ಸರ್ಕಾರ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ