
ನವದೆಹಲಿ(ಮೇ.05): ಕೊರೋನಾ ವೈರಸ್ 2ನೇ ಅಲೆಗೆ ದೇಶದಲ್ಲಿ ಹಲವು ಸಮಸ್ಯೆಗಳು ತಲೆದೋರಿದೆ. ಪ್ರಮುಖವಾಗಿ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆ ಕಾಡುತ್ತಿದೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕೇಂದ್ರ ಹಾಗೂ ದೆಹಲಿ ನಡುವಿನ ಜಟಾಪಟಿ ನಡುವೆ ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್ ಇದೀಗ ಕೇಂದ್ರ ಸರ್ಕಾರದ ಬಳಿ ಹಲವು ಪ್ರಶ್ನೆಗಳನ್ನು ಕೇಳಿದೆ.
'ಕೊರೋನಾ ನಿಯಂತ್ರಣಕ್ಕೆ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್
ಮೇ.3 ರಿಂದ ಇಲ್ಲೀವರೆಗೆ ದೆಹಲಿಗೆ ಪೂರೈಕೆ ಮಾಡಿರುವ ಆಕ್ಸಿಜನ ಪ್ರಮಾಣ ಎಷ್ಟು ಎಂದು ಹೈಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ. ಸದ್ಯ ಜನರ ಜೀವವನ್ನು ಉಳಿಸುವ ಕಾರ್ಯ ಮುಖ್ಯವಾಗಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮೇ 3 ರಂದು ದೆಹಲಿಗೆ ಪ್ರತಿ ದಿನ 700 ಟನ್ ಆಕ್ಸಿಜನ್ ಪೂರೈಸುವಂತೆ ಸೂಚಿಸಿತ್ತು.
ಇದರ ನಡುವೆ ಆಕ್ಸಿಜನ್ ಪೂರೈಕೆಯಲ್ಲಿನ ನಿರ್ದೇಶ ಪಾಲಿಸದ ಅಧಿಕಾರಿಗಳ ವಿರುದ್ಧ ದೆಹಲಿ ಕೋರ್ಟ್ ನ್ಯಾಯಾಂಗ ನಿಂದನೆ ನೊಟೀಸ್ ನೀಡಿತ್ತು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ ಕೇಂದ್ರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಸೋಂಕಿತರ ಚಿಕಿತ್ಸೆ, ಕೊರೋನಾ ತಡೆಗಟ್ಟುವ ಪ್ರಯತ್ನಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಕೋರ್ಟ್ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ