ಕೊರೋನಾ ಕಾರಣ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ; ಕೈಗಾರಿಕೆಗೆ ಆಮ್ಲಜನಕ ಪೂರೈಕೆ ನಿಷೇಧಿಸಿದ ಸರ್ಕಾರ!

By Suvarna NewsFirst Published Apr 18, 2021, 10:51 PM IST
Highlights

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಆಸ್ಪತ್ರೆಗಳು ಭರ್ತಿಯಾಗಿದೆ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದೆ. ಕೆಲ ರಾಜ್ಯಗಳು ಆಕ್ಸಿನ್ ಕೊರತೆ ಕುರಿತು ಪ್ರಶ್ನೆ ಎತ್ತಿದೆ. ತೀವ್ರ ಬೇಡಿಕೆ ಇರುವ ಕಾರಣ ಕೇಂದ್ರ ಸರ್ಕಾರ ಕೆಲ ಕೈಗಾರಿಗಳಿಗೆ ಪೂರೈಸುತ್ತಿದ್ದ ಆಕ್ಸಿಡನ್ ಸಿಲಿಂಡರ್ ನಿಷೇಧಿಸಿದೆ.

ನವದೆಹಲಿ(ಏ.18): ಕೊರೋನಾ ವೈರಸ್ ಪ್ರಕರಣಗಳು ರಾಕೆಟ್ ವೇಗದಲ್ಲಿ ಸಾಗುತ್ತಿದೆ. ಇತ್ತ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರು ಭರ್ತಿಯಾಗುತ್ತಿದ್ದಾರೆ. ಇದರ ನಡುವೆ ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆ ಕಾಡುತ್ತಿದೆ. ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕೆಲ ಕೈಗಾರಿಗಳಿಗೆ ಪೂರೈಸುತ್ತಿದ್ದ ಆಕ್ಸಿಜನ್ ಸಿಲಿಂಡರ್ ಸ್ಥಗಿತಗೊಳಿಸಿದೆ.

ಕೇಂದ್ರ ಕುತಂತ್ರಕ್ಕೆ ಆಕ್ಸಿಜನ್ ಕೊರತೆ ಎಂದ ದೆಹಲಿ ; ಕೇಜ್ರಿವಾಲ್ ರಾಜಕೀಯಕ್ಕೆ ಜನರ ಆಕ್ರೋಶ!

9 ಕೈಗಾರಿಗಳನ್ನು ಹೊರತು ಪಡಿಸಿ ಇತರ ಕೈಗಾರಿಗಳಿಗೆ ಆಕ್ಸಿನ್ ಸಿಲಿಂಡರ್ ಸ್ಥಗಿತಗೊಳಿಸುವಂತೆ ಕೇಂದ್ರ ನಿರ್ಧರಿಸಿದೆ.  ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಒಂಬತ್ತು ಕೈಗಾರಿಕೆಗಳನ್ನು ಹೊರತುಪಡಿಸಿ, ಕೈಗಾರಿಕಾ ಉದ್ದೇಶಕ್ಕಾಗಿ ಆಮ್ಲಜನಕವನ್ನು ಪೂರೈಸುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. 

ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದೆ. ಕೊರೋನಾ ಸೋಂಕಿತರ ಜೀವ ಉಳಿಸುವುದು ಮುಖ್ಯ ಎಂದು ಕೇಂದ್ರ ಹೇಳಿದೆ. 

ಪ್ರಮುಖ ನಗರಗಳಲ್ಲಿ ಆಕ್ಸಿಜನ್ ಕೊರತೆ ಇದೀಗ ತೀವ್ರವಾಗುತ್ತಿದೆ. ಸೋಂಕಿತರಿಗೆ ಆಮ್ಲಜನಕ ಕೊರತೆ ಕಾಡುತ್ತಿರುವುದರಿಂದ ಚಿಕಿತ್ಸೆ ಸವಾಲು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

click me!