
ಚೆನ್ನೈ(ಮೇ.06): ಪೊಲೀಸರಿಗೆ ಕೊರೋನಾ ಸೋಂಕು ತಗಲಿದರೆ ಏನು ಮಾಡಬೇಕು ಎಂಬುದನ್ನು ಈಗಿನಿಂದಲೇ ಯೋಚಿಸಿ ಭದ್ರತೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಹಲವು ರಾಜ್ಯಗಳಲ್ಲಿ ಪೊಲೀಸರಿಗೂ ಕೊರೋನಾ ಸೋಂಕು ತಗಲುವುದು ವರದಿಯಾಗುತ್ತಿದೆ. ಅದರ ಪ್ರಮಾಣ ಹೆಚ್ಚಾದರೆ ಪೊಲೀಸಿಂಗ್ ಕುಸಿದು ಬೀಳುತ್ತದೆ. ಹೀಗಾಗಿ ಪೊಲೀಸರ ಅಗತ್ಯವಿಲ್ಲದ ಪ್ರದೇಶಗಳಲ್ಲಿ ಭದ್ರತೆಗೆ ಹೋಮ್ ಗಾರ್ಡ್ಸ್, ಸಿವಿಲ್ ಡಿಫೆನ್ಸ್ ಸಿಬ್ಬಂದಿ, ಎನ್‌ಸಿಸಿ ಕೆಡೆಟ್‌ಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳನ್ನು ನಿಯೋಜಿಸಿ, ಪೊಲೀಸ್ ಸಿಬ್ಬಂದಿಯನ್ನು ಮೀಸಲಾಗಿ ಇರಿಸಿಕೊಳ್ಳಿ.
ಸಾಧ್ಯವಾದರೆ ಭದ್ರತಾ ಕಾರ್ಯ ಹೊರತುಪಡಿಸಿ ಇನ್ನಿತರ ಕಾರ್ಯಕ್ಕೆ ನಿಯೋಜನೆಗೊಂಡ ಪೊಲೀಸರಿಗೆ ವರ್ಕ್ ಫ್ರಂ ಹೋಮ್ ಆಯ್ಕೆ ನೀಡುವ ಬಗ್ಗೆಯೂ ರಾಜ್ಯಗಳ ಪೊಲೀಸ್ ಮುಖ್ಯಸ್ಥರು ಯೋಚಿಸಬಹುದು ಎಂದು ಕೇಂದ್ರ ಗೃಹ ಇಲಾಖೆಯ ಸುತ್ತೋಲೆ ತಿಳಿಸಿದೆ.
ಕೇಂದ್ರದ ಸೂಚನೆಗೂ ಮೊದಲೇ ತಮಿಳುನಾಡಿನಲ್ಲಿ ಶೇ.25ರಷ್ಟುಪೊಲೀಸರನ್ನು ಮನೆಯಲ್ಲಿರಿಸಿ, ಮೀಸಲು ಪಡೆಯಂತೆ ಪರಿಗಣಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ