
ನವದೆಹಲಿ(ಅ.11): ದೇಶದಲ್ಲಿ ಕೊರೋನಾ ವೈರಸ್ ಮೊದಲ ಅಲೆ ತಗ್ಗಿದೆ ಎಂಬ ವಿಶ್ಲೇಷಣೆಗಳಿಗೆ ಪೂರಕವಾಗಿ ಸತತ ಏಳು ದಿನಗಳಿಂದ ಹೊಸ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಕೊರೋನಾ ವೈರಸ್ ಆರಂಭವಾದಾಗಿನಿಂದಲೂ ಸತತವಾಗಿ ಗುಣಮುಖರಾದವರ ಸಂಖ್ಯೆಯೇ ಹೆಚ್ಚು ದಾಖಲಾಗುತ್ತಿರುವುದು ಇದೇ ಮೊದಲು. ಅಲ್ಲದೇ ಕಳೆದ 22 ದಿನಗಳಲ್ಲಿ 17 ದಿನ ಹೊಸ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು ದಾಖಲಾಗಿರುವುದು ಗಮನಾರ್ಹ.
ಭಾರೀ ಸಂಖ್ಯೆಯಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ಕಳೆದ 20 ದಿನಗಳಿಂದ ಇಳಿಕೆ ಕಾಣುತ್ತಿರುವುದು ಈ ಬೆಳವಣಿಗೆಗೆ ಪ್ರಮುಖ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅದೇ ರೀತಿ ಎರಡನೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದ ಆಂಧ್ರ ಪ್ರದೇಶದಲ್ಲೂ ಸೋಂಕಿನ ಪ್ರಮಾಣ ಕ್ರಮೇಣ ತಗ್ಗುತ್ತಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ