
ನವದೆಹಲಿ(ಜು.27): ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದೆ. ಈಗಾಗಲೇ 44 ಕೋಟಿಗೂ ಅಧಿಕ ಡೋಸ್ ನೀಡಲಾಗಿದೆ. ಇದರ ನಡುವೆ 3ನೇ ಅಲೆ ಭೀತಿ ಕಾಡುತ್ತಿದೆ. ವಿಶೇಷವಾಗಿ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಅನ್ನೋ ತಜ್ಞರ ಮಾತುಗಳು ಪೋಷಕರ ಆತಂಕ ಹೆಚ್ಚಿಸಿದೆ. ಇದೀಗ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿಕೆ ಭಾರತೀಯರಲ್ಲಿ ನೆಮ್ಮದಿ ತಂದಿದೆ.
18 ವರ್ಷ ಮೇಲ್ಪಟ್ಟವರಿಗೆ 188 ಕೋಟಿ ಲಸಿಕೆ ಅವಶ್ಯಕತೆ ಇದೆ; ಸದ್ಯ 43 ಕೋಟಿ ಪೂರೈಕೆ!
ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಮುಂದಿನ ತಿಂಗಳು(ಆಗಸ್ಟ್) ಆರಂಭಗೊಳ್ಳಲಿದೆ.2 ರಿಂದ 6 ವರ್ಷ ಹಾಗೂ 7 ರಿಂದ 17 ವರ್ಷದೊಳಗಿನ ಮಕ್ಕಳ ಕೊರೋನಾ ಲಸಿಕೆ ಪ್ರಯೋಗ ಅಂತಿಮ ಹಂತದಲ್ಲಿದೆ. ಈಗಾಗಲೇ ಉತ್ತಮ ಫಲಿತಾಂಶ ಲಭ್ಯವಾಗಿದೆ. ಹೀಗಾಗಿ ವೈದ್ಯಕೀಯ ಪ್ರಕ್ರಿಯೆ ಅಂತ್ಯಗೊಂಡ ಬೆನ್ನಲ್ಲೇ ಮಕ್ಕಳ ಲಸಿಕೆ ಲಭ್ಯವಾಗಲಿದೆ ಎಂದು ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ 2 ರಿಂದ 6 ವರ್ಷ ಮಕ್ಕಳ ಮೇಲೆ ಕೋವಾಕ್ಸಿನ್ ಲಸಿಕೆ ಪ್ರಯೋಗ ನಡೆಯುತ್ತಿದೆ. ಪ್ರಯೋಗ ಆರಂಭಗೊಂಡ ಬೆನ್ನಲ್ಲೇ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ, ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಲಭ್ಯವಾಗುವುದಾಗಿ ಹೇಳಿದ್ದರು.
40 ಕೋಟಿ ಭಾರತೀಯರಿಗೆ ಕೊರೋನಾ ಅಪಾಯ; sero ಸಮೀಕ್ಷಾ ವರದಿ!
ಜೂನ್ 7 ರಿಂದ ದೆಹಲಿಯ ಎಮ್ಸ್ ಆಸ್ಪತ್ರೆಯಲ್ಲಿ 7 ರಿಂದ 17 ವರ್ಷದ ಮಕ್ಕಳಿಗೂ ಕೊರೋನಾ ಲಸಿಕೆ ಹಂತ ಹಂತದ ಪ್ರಯೋಗ ನಡೆಯುತ್ತಿದೆ. ಮೇ 12 ರಂದು ಭಾರತದ ಡ್ರಗ್ ಕಂಟ್ರೋಲರ್ 2 ವರ್ಷ ಮೇಲ್ಪಟ್ಟ ಮಕ್ಕಳ ಮೇಲೆ ಲಸಿಕೆ ಪ್ರಯೋಗಿಸಲು ಭಾರತ್ ಬಯೋಟೆಕ್ ಸಂಸ್ಥೆಗೆ ಅನುಮತಿ ನೀಡಿತ್ತು.
ಇದೀಗ ಒಂದು ತಿಂಗಳು ಮೊದಲೇ ಲಸಿಕೆ ಲಭ್ಯತೆಯ ಸುಳಿವು ನೀಡಿದ್ದಾರೆ. ಮಕ್ಕಳಿಗೆ ಲಸಿಕೆ ನೀಡೋ ಮೂಲಕ ಕೊರೋನಾ ವಿರುದ್ಧದ ಭಾರತದ ಹೋರಾಟ ಮತ್ತಷ್ಟು ಚುರುಕುಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ