
ಹೈದ್ರಾಬಾದ್(ಜ.06): ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿರುವ ಸ್ವದೇಶಿ ಕೊರೋನಾ ಲಸಿಕೆ, ಕೋವ್ಯಾಕ್ಸಿನ್ ಅನ್ನು 2 ವರ್ಷದ ಮಕ್ಕಳ ಮೇಲೂ ಪ್ರಯೋಗಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ. ಇಂಥ ಪ್ರಯತ್ನ ವಿಶ್ವದಲ್ಲೇ ಮೊದಲಾದ ಕಾರಣ, ಈ ಬೆಳವಣಿಗೆ ಸಾಕಷ್ಟುಮಹತ್ವ ಪಡೆದುಕೊಂಡಿದೆ.
ಈ ಕುರಿತು ಹೇಳಿಕೆ ನೀಡಿರುವ ಕೋವ್ಯಾಕ್ಸಿನ್ ಉತ್ಪಾದನಾ ಸಂಸ್ಥೆಯಾಗಿರುವ ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಮುಖ್ಯಸ್ಥ ಡಾ.ಕೃಷ್ಣಾ ಎಲ್ಲಾ, ಮುಂದಿನ ಹಂತದಲ್ಲಿ ನಾವು 2ರಿಂದ 15 ವರ್ಷ ವಯಸ್ಸಿನ ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಿದ್ದೇವೆ. ಈ ಸಂಬಂಧ ನಾವು ವಿಷಯ ತಜ್ಞರ ಸಮಿತಿಗೆ ಶೀಘ್ರವೇ ಅರ್ಜಿ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದ್ದಾರೆ.
ಈಗಾಗಲೇ 12 ವರ್ಷದ ಮಕ್ಕಳ ಮೇಲೆ ಪ್ರಯೋಗಿಸಿದ ವಿಶ್ವದ ಮೊದಲ ಕೊರೋನಾ ಲಸಿಕೆ ಎಂಬ ದಾಖಲೆಯನ್ನೂ ಕೋವ್ಯಾಕ್ಸಿನ್ ಹೊಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ