ಕೊರೋನಾ ವೈರಸ್ ಮೀತಿ ಮೀರುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಕೊರೋನಾ ನಿಯಂತ್ರಣ, ಆಕ್ಸಿಜನ್, ಲಸಿಕೆ ಕೊರತೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮೋದಿ ಮಹತ್ವದ ಸೂಚನೆ ನೀಡಿದ್ದಾರೆ.
ನವದೆಹಲಿ(ಏ.23): ಸೋಂಕಿತರು, ರೋಗಿಗಳಿಗೆ ಚಿಕಿತ್ಸೆ ಜೊತೆಗೆ ಸುರಕ್ಷತೆಯೂ ಅಷ್ಟೇ ಮುಖ್ಯ. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಇದೇ ವೇಳೆ ಆಕ್ಸಿಜಿನ್, ಲಸಿಕೆ, ಇಂಜೆಕ್ಷನ್ ಸೇರಿದಂತೆ ವೈದ್ಯಕೀಯ ಸಲಕರಣೆಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ, 11 ರಾಜ್ಯದ ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಪೀಡಿತರ ಅಲೆದಾಟ ತಪ್ಪಿಸಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.
undefined
ಪ್ರಧಾನಿ ನರೇಂದ್ರ ಮೋದಿ ಕೊರೋನಾ ಮೀತಿ ಮೀರಿರುವ 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ಕೊರೋನಾ ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಮಹತ್ವದ ಸಭೆ ನಡೆಸಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ, ರಾಜ್ಯಗಳಿಗೆ ಹೆಚ್ಚುವರಿಕೆ ಲಸಿಕೆ, ಆಕ್ಸಿಜನ್ ಸೇರಿದಂತೆ ಹಲವು ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಎಲ್ಲಾ ನೆರವು ಹಾಗೂ ಸೌಲಭ್ಯ ತ್ವರಿತಗತಿಯಲ್ಲಿ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಸಂಪೂರ್ಣ ನೆರವು ಸಿಗಲಿದೆ. ಒಗ್ಗಟ್ಟಾಗಿ, ಹೋರಾಡಿದರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ಎಂದು ಮೋದಿ ಹೇಳಿದ್ದಾರೆ. ತಕ್ಕ ಸಮಯದಲ್ಲಿ ಆಕ್ಸಿಜನ್ ತಲುಪುವಂತೆ ಮಾಡಲು, ಏರ್‌ಫೋರ್ಸ್, ರೈಲ್ವೇ ಇಲಾಖೆಗಳನ್ನು ಬಳಸಿಸಿಕೊಳ್ಳಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಸಿಎಂ ಜೊತೆ ಪಿಎಂ ಚರ್ಚೆ: ಆಕ್ಸಿಜನ್, ಲಸಿಕೆಗಾಗಿ ಬಿಎಸ್‌ವೈ ಮನವಿ
ರಾಜ್ಯಗಳಿಗೆ 15 ಕೋಟಿ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ. ಈ ಕಠಿಣ ಪರಿಸ್ಥಿತಿಯಲ್ಲಿ ದೇಶದ ಕೊರೋನಾ ಲಸಿಕೆ ಅಭಿಯಾನದಲ್ಲಿ ಮಂದಗತಿ ಸಲ್ಲದು. ತ್ವರಿತಗತಿಯಲ್ಲಿ ಲಸಿಕೆ ನೀಡಬೇಕು ಎಂದು ಸೂಚಿಸಿದ್ದಾರೆ. ಇದುರೆಗೆ 13 ಕೋಟಿ ಹೆಚ್ಚು ಲಸಿಕೆಯನ್ನು ನೀಡಲಾಗಿದೆ. ಮೇ.1 ರಿದ 18 ವರ್ಷ ಮೇಲ್ಪಟ್ಟವರಿಗೆ ಲಸಿಕ ನೀಡಲಾಗತ್ತಿದೆ. ಈ ಕುರಿತು ರಾಜ್ಯಗಳು ಮಿಂಚಿನ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಸೋಂಕಿತರು, ರೋಗಿಗಳಿಗೆ ಚಿಕಿತ್ಸೆಗೆ ಬೆಡ್ ಲಭಿಸುವಂತೆ ಮಾಡುವುದು ಎಷ್ಟು ಮುಖ್ಯವೋ, ಅವರ ಸುರಕ್ಷತೆ ಕೂಡ ಅಷ್ಟೆ ಮುಖ್ಯ. ಕೆಲ ಅಹಿತರ ಘಟನೆ ನಡೆಯದಂತೆ ಮುನ್ನಚ್ಚೆರಿಕೆ ವಹಿಸುವುದು ಅತೀ ಅಗತ್ಯ ಎಂದು ಮೋದಿ ಹೇಳಿದ್ದಾರೆ. ಇತ್ತೀಚೆಗೆ ಆಸ್ಪತ್ರೆಗಳಲ್ಲಿ ನಡೆದ ಆಮ್ಲಜನ ಸೋರಿಕೆ, ಬೆಂಕಿ ಅವಘಡಗಳಿಗೆ ದುಃಖ ವ್ಯಕ್ತಪಡಿಸಿದ ಮೋದಿ, ಈ ರೀತಿ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಜನರಿಗೆ ಅರಿವು ಮೂಡಿಸುವುದು ಅತೀ ಅಗತ್ಯ. ಖರೀದಿಗೆ ಮುಗಿ ಬೀಳದಂತೆ ನೋಡಿಕೊಳ್ಳಬೇಕಿದೆ. ಜನರಲ್ಲಿ ಜಾಗೃತಿ ಮೂಡಿಸೋ ಮೂಲಕ ಕೊರೋನಾ ವಿರುದ್ಧ ಹೋರಾಡಬೇಕು. ಯಾವುದೇ ಕಾರಣಕ್ಕೂ ಜನರಲ್ಲಿ ಆತಂಕ ಸೃಷ್ಟಿಸುವ ಕೆಲಸವಾಗಬಾರದು ಎಂದು ಮೋದಿ ಮನವಿ ಮಾಡಿದ್ದಾರೆ.